ದಾವಣಗೆರೆ : ಹರಿಹರ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (SC/ST) ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಈಗಾಗಲೇ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ನವೀಕರಣಗೊಂಡಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹರಿಹರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹರಿಹರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅಕ್ಟೋಬರ್ 13ರಂದು ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣಾ ಶಿಬಿರ.
ದಾವಣಗೆರೆ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಕ್ಟೋಬರ್ 13 ರಂದು ಬೆಳಿಗ್ಗೆ 9:30 ರಿಂದ ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್, ದವನ ಕಾಲೇಜು ಹತ್ತಿರವಿರುವ ಸರ್ಕಾರಿ ನಿವೃತ್ತ ನೌಕರರ ಭವನ ಇಲ್ಲಿ ಹಿರಿಯ ನಾಗರಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಜಿಲ್ಲೆಯ ಸಮಸ್ತ ಹಿರಿಯ ನಾಗರಿಕರು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7483968224 / 7337635691 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳಾದ ರಶ್ಮಿ. ಅವರು ತಿಳಿಸಿದ್ದಾರೆ.










