Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜುಲೈ20: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿಗಳು, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

2026-27ನೇ ಸಾಲಿನ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, 2025ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27ನೇ ಸಾಲಿನ ಗುರಿ-ಒಲಂಪಿಕ್ ಪದಕ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿ ಸೌಲಭ್ಯಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಹ ಕ್ರೀಡಾಪಟುಗಳು ಸರ್ಕಾರದ ಅಧಿಕೃತ ಸೇವಾಸಿಂಧು ಜಾಲತಾಣದ https://sevasindhu.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಜುಲೈ 31ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-235635 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now