ಚಿತ್ರದುರ್ಗ. ಜುಲೈ. 21: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ‘ಅಗ್ನಿವೀರ್ ವಾಯು’ (02/2027) ಹುದ್ದೆಗಳ ಆಯ್ಕೆ ಪರೀಕ್ಷೆಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01 ಜುಲೈ 2005 ರಿಂದ 01 ಜನವರಿ 2010 ರ ನಡುವೆ ಜನಿಸಿರಬೇಕು ಹಾಗೂ ನೋಂದಣಿ ದಿನಾಂಕದ ವೇಳೆಗೆ ಗರಿಷ್ಠ 22 ವರ್ಷ ಮೀರಬಾರದು. ವಿಜ್ಞಾನ ವಿಭಾಗದ ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ 10+2/ಪಿಯುಸಿಯಲ್ಲಿ ಕನಿಷ್ಠ ಶೇ. 50 ಅಂಕ ಗಳಿಸಿರಬೇಕು (ಇಂಗ್ಲಿಷ್‍ನಲ್ಲಿ ಕನಿಷ್ಠ ಶೇ. 50 ಅಂಕ ಕಡ್ಡಾಯ) ಅಥವಾ ಶೇ. 50 ಅಂಕಗಳೊಂದಿಗೆ 3 ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ/ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು. ಇತರ ವಿಭಾಗದ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಕನಿಷ್ಠ ಶೇ. 50 ಅಂಕ ಹಾಗೂ ಇಂಗ್ಲಿಷ್‍ನಲ್ಲಿ ಶೇ. 50 ಅಂಕಗಳೊಂದಿಗೆ ಪಿಯುಸಿ/10+2 ಅಥವಾ 2 ವರ್ಷಗಳ ವೃತ್ತಿಪರ ಕೋರ್ಸ್ ಪೂರ್ಣಗೊಳಿಸಿರಬೇಕು.
ಅರ್ಜಿಯೊಂದಿಗೆ ಶೈಕ್ಷಣಿಕ ಪ್ರಮಾಣ ಪತ್ರ, ಆಧಾರ್/ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ದೈಹಿಕ ಸಾಮಥ್ರ್ಯ ಪ್ರಮಾಣ ಪತ್ರ ಹಾಗೂ ಭಾವಚಿತ್ರಗಳನ್ನು ಸಲ್ಲಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು
https://iafrecruitment.edcil.co.in
ವೆಬ್‍ಸೈಟ್‍ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರ, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-295108, ಮೊಬೈಲ್ ಸಂಖ್ಯೆ 9945587060, 7022459064 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









