Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯುತ್ ಮೋಟಾರ್‌ ರೀವೈಂಡಿಂಗ್  ಹಾಗೂ ಫಾಸ್ಟ್‌ ಫುಡ್‌ ತರಬೇತಿಗಾಗಿ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ 30 ದಿನಗಳ ಉಚಿತ ವಿದ್ಯುತ್ ಮೋಟಾರ್‌ ರೀವೈಂಡಿಂಗ್ ತರಬೇತಿ ಹಾಗೂ 12 ದಿನಗಳ ಉಚಿತ ಫಾಸ್ಟ್‌ ಫುಡ್‌ ತಯಾರಿಕೆ (Fast Food Stall Udyami) ಕುರಿತು ತರಬೇತಿಯನ್ನು   ಅಕ್ಟೋಬರ್  22 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9380162042, 9241482541 9481506564, ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಗಿರಿಧರ್ ಅವರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now