ದಾವಣಗೆರೆ.ಸೆಪ್ಟೆಂಬರ್.24 : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿಗೆ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾಂತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31 ರೊಳಗೆ, ವೆಬ್ ಸೈಟ್ sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ವಿಶೇಷ ಸೂಚನೆ
ಅರ್ಜಿದಾರರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಕಡ್ಡಾಯವಾಗಿರುತ್ತದೆ ಹಾಗೂ ಈ ಹಿಂದೆ ಯೋಜನೆಗಳ ಲಾಭ ಪಡೆದವರು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ. ಹಾಗೆಯೇ, ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಸಿಗದಿದ್ದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ .
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಂ.ಸಿ.ಸಿ. ‘ಬಿ’ ಬ್ಲಾಕ್, ಕುವೆಂಪು ನಗರ, ದಾವಣಗೆರೆ ಅಥವಾ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.










