ಬೆಂಗಳೂರು.ಸೆಪ್ಟೆಂಬರ್.22 : ಕರ್ನಾಟಕ ಮಹಿರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ಕಾರ್ಯಕ್ರಮಗಳಲ್ಲಿ ನೇರಸಾಲ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಯೋಜನೆ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಫಲಾಪೇಕ್ಷಿತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪ.ಪಂ.ಕ್ಕೆ ಸೇರಿದವರಾಗಿರಬೇಕು. ವ್ಯವಸಾಯಕ್ಕೆ ಸಂಬಂಧಪಟ್ಟಂತೆ 18 ರಿಂ 60, ವಾಹನ, ಸ್ವಯಂ ಉದ್ಯೋಗ ಉದ್ದೇಶಗಳಿಗೆ ಸಂಬಂಧಪಟ್ಟಂತೆ 18 ರಿಂದ 50 ವಯೋಮಾನದವರಾಗಿರಬೇಕು. ಕೊಳವೆಬಾವಿ ಸೌಲಭ್ಯಕ್ಕೆ ಯಾವುದೇ ವಯೋಮಿತಿ ಇರುವುದಿಲ್ಲ. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 1.50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2.00 ಲಕ್ಷಗಳ ಮಿತಿಯಲ್ಲಿರಬೇಕು. ಕುಟುಂಬದ ಯಾವುದೇ ಸದಸ್ಯರುವ ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು ಹಾಗೂ ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಮಹಿಳೆಯರಿಗೆ ಶೇ. 33 ರಷ್ಟು ಮತ್ತು ಅಂಗವಿಕಲರಿಗೆ ಶೇ.5 ರಷ್ಟು ಗುರಿಯಲ್ಲಿ ಮೀಸಲಾತಿ ಕಲ್ಪಿಸಲಾಗುವುದು.
ಆಸಕ್ತ ಅರ್ಜಿದಾರರು ವೆಬ್ ಪೋರ್ಟಲ್https://sevasindhu.karnataka.gov.in ಮೂಲಕ ದಿ:17/10/2026 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.: 08182-276776 ಅಥವಾ https://kmvstdcl.karnataka.gov.in ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.










