ಚಿತ್ರದುರ್ಗ. ಜುಲೈ23: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ ನೀಡಲಾಗಿದ್ದು, ಈ ಸಂಬಂಧ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 2 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ನಲ್ಲಿ https://sevasindhu.karnataka.gov.in ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ. ಜುಲೈ23: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿಯುಸಿ ಹಾಗೂ ಸಮನಾಂತರ ಕೋರ್ಸ್ ಮತ್ತು ಪದವಿಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 02 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿಗಳನ್ನು ಜಾಲತಾಣದ ವಿಳಾಸ https://shp.karnataka.gov.in ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.



