ಚಿತ್ರದುರ್ಗ, ಜೂನ್. 27 : ಕರ್ನಾಟಕ ರಾಜ್ಯ ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆ (ರಿ) ಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85 ರಷ್ಟು ಹಾಗೂ ಪಿ.ಯು.ಸಿಯಲ್ಲಿ ಶೇ.80 ಕ್ಕಿಂತಲೂ ಹೆಚ್ಚು ಅಂಕಗಳಿಸಿರುವ ಹಿಂದುಳಿದ ಸಣ್ಣ ಸಮುದಾಯಗಳಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 10 ಕಡೆ ದಿನಾಂಕವಾಗಿದ್ದು, ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ನಕಲು, ಭಾವಚಿತ್ರ ಹಾಗೂ ವಿಳಾಸ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಜೊತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ವಿಶೇಷ ಪುರಸ್ಕಾರವೂ ಇರುವುದು.

ಅರ್ಜಿಗಳನ್ನು ನೇರವಾಗಿ ಅಥವ ಅಂಚೆ, ಕೋರಿಯರ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ; ಟಿ.ತಿಪ್ಪೇಸ್ವಾಮಿ ಸಂಪಿಗೆ, ಅಧ್ಯಕ್ಷರು, ಅಲಕ್ಷಿತ ಸಣ್ಣ ಸಮುದಾಯಗಳ ಮಹಾವೇದಿಕೆ (ರಿ), ಕನ್ನಡ ಸಂಪಿಗೆ ನಿಲಯ, ವೇಮನ ನಗರ, ಪ್ರಸಾದ್ ಆಸ್ಪತ್ರೆ ಬಳಿ, ಚಳ್ಳಕೆರೆ ರಸ್ತೆ, ಚಿತ್ರದುರ್ಗ-577501. ವಿವರಗಳಿಗೆ ಮೊಬೈಲ್ ಸಂಖ್ಯೆ; 9731338670 ಸಂಪರ್ಕಿಸಲು ಕೋರಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















