Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ. ಜೂನ್29: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಕ್ರಿಶ್ಚಿಯನ್ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ FRESH/CET/NEET/JEE  ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂ.ಡಿ/ಎಂ.ಎಸ್ ಕೋರ್ಸುಗಳಿಗೆ ಸರ್ಕಾರಿ, ಖಾಸಗಿ ಹಾಗೂ ಮ್ಯಾನೇಜ್‍ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ.5 ಲಕ್ಷದವರೆಗೆ ಸಾಲ ಸೌಲಭ್ಯ ದೊರೆಯಲಿದೆ. ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅನ್ವಯಿಸಲಿದೆ.

 

ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kccdconline.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಬೇಕು. ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ವಾರ್ಷಿಕ ಆದಾಯ ₹8 ಲಕ್ಷದ ಒಳಗಿರಬೇಕು), ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರಗಳು, CET/NEET/JEE  ಹಾಲ್ ಟಿಕೆಟ್, ನೋಟರಿಯೊಂದಿಗೆ ಮಾಡಿಸಿದ ಇಂಡೆಮ್ನಿಟಿ ಬಾಂಡ್ ಹಾಗೂ ವಿದ್ಯಾರ್ಥಿ ಮತ್ತು ಪೋಷಕರ ಸ್ವಯಂ ಘೋಷಣಾ ಪತ್ರ ಸಲ್ಲಿಸಬೇಕು.

ಈ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ,  2ನೇ ಮಹಡಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226412, ಮೊಬೈಲ್ ಸಂಖ್ಯೆ 8277944213 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕ್ರಿಶ್ವಿಯನ್ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now