ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ,(ಜೂನ್.09) : ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರು 2022-23ನೇ ಸಾಲಿನಿಂದ ಸಮನ್ವಯ ಶಿಕ್ಷಣ ಮಧ್ಯವರ್ತನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 16 ಖಾಲಿ ಇರುವ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರುಗಳ (ಪ್ರಾಥಮಿಕ & ಪ್ರೌಢ) ಹುದ್ದೆಗಳನ್ನು ನೇರ ಗುತ್ತಿಗೆಯಡಿಯಲ್ಲಿ ಭರ್ತಿಗೆ ಶಿಕ್ಷಣದಲ್ಲಿ ಸ್ಪೆಷಲ್ ಡಿ.ಇಡಿ, ಸ್ಪೆಷಲ್ ಬಿ.ಇಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಜೂನ್ 9 ರಿಂದ ಜೂನ್ 13ರ ಮಧ್ಯಾಹ್ನ 1.30 ರವರೆಗೆ ಅರ್ಜಿಗಳನ್ನು  ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಚಿತ್ರದುರ್ಗ ಇಲ್ಲಿಗೆ ಮುದ್ದಾಂ ಆಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಜೀವ ಮೊ: 8073269824ಗೆ ಸಂಪರ್ಕಿಸಬೇಕೆಂದು  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!