Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರ ಹುದ್ದೆಗೆ ನನ್ನನ್ನು ನೇಮಿಸಿ : ಎ.ಜಾಕೀರ್ ಹುಸೇನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ,ಜು. 24 : ಜಿಲ್ಲಾ ವಕ್ಫ್ ಬೋರ್ಡ್ ಸಮಿತಿ ಒಂದು ಮಹತ್ವದ ಸಂಸ್ಥೆಯಾಗಿದ್ದು, ಇದು ಸಾಮಾಜಿಕ ಸೇವಾ ವಲಯದ ಸಂಸ್ಥೆಯಾಗಿದೆ. ಜಿಲ್ಲೆಯ ಎಲ್ಲಾ ಮಸೀದಿಗಳ, ದರ್ಗಾ, ಇತರೆ ಸಂಸ್ಥೆಗಳ ಮುತುವಲ್ಲಿ, ಗುರುಗಳು, ಸಮಾಜದ ಮುಖಂಡರು ನನ್ನ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಅಧ್ಯಕ್ಷರ ಹುದ್ದೆಗೆ ನೇಮಕ ಮಾಡಲು ನೆರವಾದರೆ  ಜನರ ಋಣ ತೀರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಜಿಲ್ಲಾ ಬಡಗಿ ನೌಕರರ ಸಂಘದ ಅಧ್ಯಕ್ಷ ಎ.ಜಾಕೀರ್ ಹುಸೇನ್ ಭರವಸೆ ನೀಡಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಬುಧವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಕ್ಛ್ ಬೊರ್ಡ್‍ನ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಅತೀ ಶೀಘ್ರದಲ್ಲೇ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಅರಂಭವಾಗಲಿದ್ದು, ಈ ಹುದ್ದೆಗೆ ಹಲವರು ಪ್ರಯತ್ನ ಪಟ್ಟಿರುವುದು ತಿಳಿದಿರುವ ವಿಚಾರವೇ ಆಗಿದೆ. ನಾನು ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರದುರ್ಗದಲ್ಲಿ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಬಂದಿರುತ್ತೇನೆ. ಅದರಲ್ಲೂ ವಿಶೇಷವಾಗಿ ಕೂಲಿಕಾರ್ಮಿಕರು, ವಿವಿಧ ವರ್ಗಗಳ ಕಾರ್ಮಿಕರ ಸಂಘಟನೆಗಳು, ಜನಪರ ಸಂಘಟನೆಗಳು, ಇತ್ಯಾದಿ ಸಂಘ ಸಂಸ್ಥೆಗಳಲ್ಲಿ ಸುಧೀರ್ಘವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿದ್ದು, ಸಾವಿರಾರು ಬಡವರು, ಕಾರ್ಮಿಕರು, ಇತರೆ ವರ್ಗದ ಜನರ ಶ್ರೇಯಸ್ಸಿಗೆ ಶ್ರಮಿಸಿದ್ದೇನೆ ಎಂದರು.

ಕಳೆದ ಹಲವು ದಶಕಗಳಿಂದ ನಾನು ಸಾಮಾಜಿಕ ಕ್ಷೇತ್ರದಲ್ಲಿ ಗುರ್ತಿಸಿಕೊಂಡಿರುವ ಕಾರಣ ನಮ್ಮ ಮುಸ್ಲಿಂ ಸಮಾಜದ ಹಲವಾರು ಮುಖಂಡರು, ಧಾರ್ಮಿಕ ನಾಯಕರು, ವಿವಿಧ ಜನಪರ ಹೋರಾಟಗಾರರ ಒತ್ತಾಸೆಯಂತೆ ಈ ಹುದ್ದಗೆ ಆಕಾಂಕ್ಷಿಯಾಗಿದ್ದೇನೆ. ಜಿಲ್ಲೆಯಲ್ಲಿರುವ ಬಹುತೇಕ ಎಲ್ಲಾ ವರ್ಗದ ಜನರ ಜೊತೆಗೆ ಒಡನಾಟವನ್ನಿಟ್ಟುಕೊಂಡು ಬಂದಿರುತ್ತೇನೆ.ಈ ಹಿಂದೆ ಆಜಾóದ್ ನಗರ  ಅಂಜುಮಾನ್ ಮಸೀದಿ ಆಡಳಿತ ಮಂಡಳಿಗೆ ನಿರ್ದೇಶಕನಾಗಿ ನೇಮಕಗೊಂಡಿದ್ದು, ಕರ್ನಾಟಕ ಮುಸ್ಲಿಂ ಸಂಘದ ಕಾರ್ಯಾಧ್ಯಕ್ಷರಾಗಿ, ಮುಸ್ಲಿಂ ಆಫ್ ಇಂಡಿಯಾ ಸಂಘಟನೆಯ ರಾಜ್ಯಾಧ್ಯಕ್ಷನಾಗಿ ಮುಸ್ಲಿಂ ಸಮಾಜದ ಹಿತಕ್ಕಾಗಿ ಶ್ರಮಿಸಿರುತ್ತೇನೆ. ಇಂಟೆಕ್ (ಕೆಪಿಸಿಸಿ) ಉಪಾಧ್ಯಕ್ಷರಾಗಿ ಐ.ಎಂ.ಬಿ.ಸಿ.ಎಫ್.ಡಬ್ಲ್ಯೂ. ಉಪಾಧ್ಯಕ್ಷರಾಗಿ ಚಿತ್ರದುರ್ಗ ಕಟ್ಟಡ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದು, ಇದರ ಜೊತೆಗೆ ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿಯೂ ಕೂಡ ಗುರುತಿಸಿಕೊಂಡಿರುತ್ತೇನೆ ಎಂದು ಜಾಕೀರ್ ಹುಸೇನ್ ತಿಳಿಸಿದರು.

ಈ ಹುದ್ದೆಗೆ ಸರ್ಕಾರ, ಸಮಾಜ, ನನಗೆ ಅವಕಾಶಕೊಟ್ಟರೆ ಆ ಸಂಸ್ಥೆಗೆ ಘನತೆಯನ್ನು ತರುವಂತಹ ಕೆಲಸವನ್ನು ಮಾಡುತ್ತೇನೆ. ವಕ್ಫ್ ಬೋರ್ಡ್ ಸಮಿತಿಗೆ ಆದಾಯ ಮೂಲವನ್ನು ಹೆಚ್ಚಿಸುವ ಕೆಲಸದ ಜೊತೆಗೆ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಾಣಿಜ್ಯ ಮಳಿಗೆಗಳಲ್ಲಿ ಅಲ್ಲಲ್ಲಿ ಕಂಡುಬರುತ್ತಿರುವ ವ್ಯತ್ಯಾಸಗಳನ್ನು ಸರಿಪಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಖಾಲಿ ಇರುವ ಸಂಸ್ಥೆಯ ನಿವೇಶನಗಳಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ಅತಿಕಡಿಮೆ ದರದಲ್ಲಿ ಬಡವರಿಗೆ ಜೀವನ ನಡೆಸಲು ಅನುಕೂಲವಾಗುವ ರೀತಿಯಲ್ಲಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ನನಗೆ ವಕ್ಫ್ ಬೋರ್ಡ್ ಸಮಿಗೆ ನೇಮಕ ಮಾಡಿದರೆ ಪ್ರತಿ ವಾರ ಜಿಲ್ಲೆಯ ಎಲ್ಲಾ ಮಸೀದಿಗಳಿಗೆ ಕಡ್ಡಾಯವಾಗಿ ಭೇಟಿನೀಡಿ, ಅಲ್ಲಿನ ಮುಖ್ಯಸ್ಥರ ಜೊತೆಗೆ ಚರ್ಚಿಸಿ, ಅಲ್ಲಿ ಬೇಕಾಗಿರುವ ಕುಡಿಯುವ ನೀರು, ಚರಂಡಿ, ವಿದ್ಯುತ್, ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ತರುವ ಪ್ರಯತ್ನ ಮಾಡುತ್ತೇನೆ. ಕೆಲವು ಕಡೆ ವಕ್ಫ್ ಬೋರ್ಡ್ ಸಮಿತಿಯ ಮಳಿಗೆಗಳು ಒಂದೇ ಕುಟುಂಬಕ್ಕೇ ಹೆಚ್ಚಿನ ಮಳಿಗೆಗಳು ವಿತರಣೆಯಾಗಿರವುದು ಕಂಡುಬಂದಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸಿ, ನ್ಯಾಯ ಸಮ್ಮತವಾಗಿ ವಿತರಣೆಮಾಡಲು ಪ್ರಯತ್ನ ಮಾಡುತ್ತೇನೆ ಎಂದರು.

ಮುಸ್ಲಿಂ ಸಮಾಜದ ಹಿರಿಯ ಮುಖಂಡ ಹಾಗೂ ಟಿಪ್ಪು ಅಭಿಮಾನಿಗಳ ಮಹಾವೇದಿಕೆಯ ಅಧ್ಯಕ್ಷ ಟಿಪ್ಪು ಖಾಸಿಂ ಮಾತನಾಡಿ, ಜಿಲ್ಲೆಯಲ್ಲಿ ಮೂರು ದಶಕಗಳಿಂದ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಎ.ಜಾಕೀರ್ ಹುಸೇನ್ ಅವರಿಗೆ ಅವಕಾಶ ನೀಡಿದರೆ ನಿಜಕ್ಕೂ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ಮುಖಂಡರಾದ ಬಂಡೇಜಬೀ, ಎಂ.ಡಿ.ಅಸ್ಲಾಂ, ಆರ್.ಕೆ.ರಿಯಾಜ್, ಅಜುರುದ್ದೀನ್ ಇನ್ನಿತರರು ಉಪಸ್ಥಿತಿದ್ದರು.

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment