ಬೆಂಗಳೂರು: ಖಾಲಿ ಇದ್ದ ನಿಗಮಗಳ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿತ್ತು. ಆದ್ರೆ ಅದರೊಳಗೆ ಕೊಂಚ ಗೊಂದಲ ಉಂಟಾಗಿತ್ತು. ಎಐಸಿಸಿ ನೀಡಿದ್ದ ಪಟ್ಟಿಯನ್ನ ಕೊಂಚ ಮಾರ್ಪಾಡು ಮಾಡಿ, ಸಿದ್ದರಾಮಯ್ಯ ಅವರು ಅಧಿಕೃತ ಮುದ್ರೆ ಒತ್ತಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಅವರು ಬದಲಾಯಿಸಿದ್ದೇನು..? ಹೈಕಮಾಂಡ್ ನೀಡಿದ್ದ ಪಟ್ಟಿ ಯಾವುದು ಎಂಬ ಮಾಹಿತಿ ಇಲ್ಲಿದೆ.
ಇತ್ತೀಚೆಗಷ್ಟೆ ಎಐಸಿಸಿ ಪಟ್ಟುಯನ್ನ ಬಿಡುಗಡೆ ಮಾಡಿತ್ತು. ಆ ಪಟ್ಟಿಯಲ್ಲಿ ಒಟ್ಟು 39 ಜನರ ಹೆಸರು ಇತ್ತು. ಆ 39 ಜನರ ಬದಲುಗೆ ಸಿಎಂ ಸಿದ್ದರಾಮಯ್ಯ ಅವರು ಬದಲಾವಣೆ ಮಾಡಿ, 34 ಮಂದಿಗೆ ಅಧ್ಯಕ್ಷರ ಪಟ್ಟಿ ತಯಾರಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಫೈನಲ್ ಪಟ್ಟಿಯು ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಇಲಾಖೆಗಳಿಗೆ ಪಟ್ಟಿಯನ್ನು ರವಾನೆ ಮಾಡಲಾಗಿದೆ.
ಎಐಸಿಸಿ ಕೊಟ್ಟಿದ್ದ ಪಟ್ಟಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಸ್ಥಾನದ ಗೊಂದಲ ವಿಚಾರಕ್ಕೆ ಸಂಬಂಧ ಪಟ್ಟಂತೆ ರಾಜೂ ಕಾಗೆ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡ ಧೈರ್ಯ ತುಂಬಿ ಕಳುಹಿಸಿದ್ದರು. ಹಾಗೇ ಮೈಸೂರು ಪೇಂಟ್ಸ್, ವಾರ್ನೀಶ್ ಲಿಮಿಟೆಡ್ ನಿಗಮಕ್ಕೆ ಹೆಚ್.ಡಿ.ಗಣೇಶ್, ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕವಾಗಿದ್ದಾರೆ. ಆದರೆ ಇಲ್ಲಿ ಟ್ವಿಸ್ಟ್ ಅಂದ್ರೆ ಎಐಸಿಸಿ ರವಾನೆ ಮಾಡಿರುವ ಪಟ್ಟಿಯಲ್ಲಿ ಹೆಚ್ ಡಿ ಗಣೇಶ್ ಹಾಗೂ ನಿಕೇತ್ ರಾಜ್ ಅವರ ಹೆಸರುಗಳು ಇರಲಿಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











