ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಕಸರತ್ತು ನಡೆಯುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಇರುವ ಹಿನ್ನೆಲೆ ಜೆಡಿಎಸ್ ರಾಜ್ಯಾಧ್ಯಕ್ಷ ಆಯ್ಕೆಯನ್ನು ಮಾಡಲಾಗುತ್ತಿದೆ. ಪಕ್ಷ ಸಂಘಟನೆ, ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸಲು ಜೆಡಿಎಸ್ ಈ ನಿರ್ಧಾರ ಮಾಡಿದೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಆಯ್ಕೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಯುವ ಘಟಕ ನಿಖಿಲ್ ಕುಮಾರಸ್ವಾಮಿಯವರನ್ನೇ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಆದರೆ ಚುನಾವಣೆಯನ್ನು ನಡೆಸಿಯೇ ರಾಜ್ಯಾದ್ಯಕ್ಷರ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆಯ ಮೂಲಕ ನಡೆಸುವ ನಿರ್ಧಾರ ಮಾಡಲಾಗಿದೆ. ಪಕ್ಷದ ದ್ವೈ ವಾರ್ಷಿಕ ಸಾಂಸ್ಫಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣಾ ತಯಾರಿ ಹಾಗೂ ಪಕ್ಷದ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧರಾಗಳನ್ನು ಮಾಡಲಾಗಿದೆ. ಮುಂದಿನ ಏಪ್ರಿಲ್ ಒಳಗೆ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಾದ ತೀರ್ಮಾನವಾಗಿದೆ.
ಪಕ್ಷಕ್ಕಾಗಿ ಯಾರೂ ಪ್ರಾಮಾಣಿಕವಾಗಿ ದುಡಿಯುತ್ತಾರೋ ಅಂಥವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ. ವಾರದಲ್ಲಿ ನಾಲ್ಕು ದಿನ ನವದೆಹಲಿಯ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕ ಹಾಗೂ ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷಕ್ಕಾಗಿ ಮೀಸಲಿಡುತ್ತೇನೆ ಎಂದಿದ್ದಾರೆ.