ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್
ಚಿತ್ರದುರ್ಗ,(ಜು.03) : ಆಗಸ್ಟ್‌ನಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದ ಸಮಯದಲ್ಲಿ ನಿಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಮುಖ್ಯಮಂತ್ರಿಗಳು ಸಹಾ ನಿಮ್ಮ ಸಮಸ್ಯೆ ಪರಿಹಾರಕ್ಕೆ ಸಮಯವನ್ನು ಕೇಳಿದ್ದಾರೆ. ಅಲ್ಲಿಯವರೆಗೂ ಸಮಾಧಾನದಿಂದ ಇರುವಂತೆ ಹೂರ ಗುತ್ತಿಗೆ ಪೌರ ಕಾರ್ಮಿಕರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಮ್ಮನ್ನು ಖಾಯಂ ಮಾಡಿ ವಿವಿಧ ರೀತಿಯ ಸೌಲಭ್ಯವನ್ನು ನೀಡುವಂತೆ ಆಗ್ರಹಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಿಮಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯವನ್ನು ನೀಡಬೇಕಿದೆ. ಖಾಯಂ ಮಾಡಬೇಕಿದೆ ಇದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆಯಲ್ಲಿ ಮಾತುಕಥೆಯನ್ನು ನಡೆಸಿದ್ದಾರೆ. ಹಣಕಾಸಿನ ವಿಚಾರವಾಗಿ ಇಲಾಖೆಗೆ ಸೂಚನೆ ನೀಡಲಾಗಿದೆ. ಇದಕ್ಕೆ ಸಮಯದ ಅಗತ್ಯ ಇದೆ ಎಂದರು.
ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಅಗತ್ಯ ಇದೆ. ಅದರೆ ನಮ್ಮ ಸೇರಿದಂತೆ ಇತರೆಡೆಗಳಲ್ಲಿ ಕಡಿಮೆ ಇದೆ. ಇದರಿಂದ ಹೂರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಹಲವಾರು ವರ್ಷ ಕೆಲಸವನ್ನು ಮಾಡಿರುವ ನೀವು ಈಗ ಖಾಯಂ ಮಾಡುವಂತೆ ಸರ್ಕಾರದ ಮೇಲೆ ಒತ್ತಡವನ್ನು ಹೇರಲಾಗುತ್ತಿದೆ. ಸರ್ಕಾರವೂ ಇದರ ಬಗ್ಗೆ ಧೀಡಿರನೆ ಏನನ್ನು ಸಹಾ ಹೇಳುವ ಹಾಗಿಲ್ಲ ಇದರ ಬಗ್ಗೆ ಫೈನಾಸ್ಸ್ ಇಲಾಖೆಯ ಅನುಮತಿ ಅಗತ್ಯ ಇದೆ ಅವರು ಅನುಮತಿ ನೀಡಿದರೆ ಮಾತ್ರ ನಿಮ್ಮ ಕೆಲಸ ಖಾಯಂ ಆಗಲು ಸಾಧ್ಯವಿದೆ ಏಕೆಂದರೆ ಒಮ್ಮೆ ಮಾತು ಕೊಟ್ಟರೆ ನಿಮಗೆ ಪ್ರತಿ ತಿಂಗಳು ವೇತನವನ್ನು ನೀಡಬೇಕಿದೆ ಇದು ಕೋಟ್ಯಾಂತರ ರೂ.ಆಗಲಿದೆ ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಸಮಯವನ್ನು ತೆಗೆದುಕೊಂಡಿದ್ದಾರೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.
ಆಗಸ್ಟ್ ಮಾಹೆಯಲ್ಲಿ ವಿಧಾನಮಂಡಲದ ಅಧಿವೇಶವನ್ನು ಕರೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅಸಮಯದಲ್ಲಿ ನಿಮ್ಮ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಆ ಸಮಯದಲ್ಲಿ ನೀವುಗಳು ರಾಜ್ಯದ ವಿವಿಧೆಡೆಗಳಿಂದ ಬೆಂಗಳೂರಿಗೆ ಬರುವುದರ ಮೂಲಕ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರನ್ನು ಬೇಟಿ ಹಾಗೂ ರಾಜ್ಯದ ಎಲ್ಲಾ ಶಾಸಕರಿಗೂ ಸಹಾ ನಿಮ್ಮ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿಕೊಡಿ ಇದರಿಂದ ನಿಮ್ಮ ಸಮಸ್ಯೆ ಪರಿಹಾರಕ್ಕೆ ದಾರಿ ಸುಗಮವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ದುರುಗೇಶ್, ರಾಜಣ್ಣ, ತಿಪ್ಪೇಸ್ವಾಮಿ, ಮಾನಪ್ಪ, ನಾಗರಾಜ್, ಮಲ್ಲಿಕಾರ್ಜನ್, ಕರಿಯಪ್ಪ, ನಾಗರತ್ನ, ಮಂಜುಳ ಸೇರಿದಂತೆ ಇತರರು ಉಪಸ್ಥಿತರಿದ್ದರು.