ಚಿತ್ರದುರ್ಗ, (ಮಾ.04) : ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಂದು ವಾರದಲ್ಲಿ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.

ನಗರದ ಮುರುಘಾರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಶನಿವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶೀಘ್ರದಲ್ಲಿ ಮತ್ತೊಮ್ಮೆ ಚಿತ್ರದುರ್ಗ ನಗರಕ್ಕೆ ಆಗಮಿಸಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಯನ್ನೂ ನೆರವೇರಿಸುವುದಾಗಿ ಹೇಳಿದರು.

