ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದಾಗಿ ಇಡೀ ರಾಜ್ಯದ ಜನ ಶಾಕ್ ನಲ್ಲೇ ಇದ್ದಾರೆ. ಯಾರ್ ಯಾರಿಗೂ ಇನ್ನು ನಂಬಿಕೆ ಬರ್ತಾ ಇಲ್ಲ. ಈ ನಡುವೆ ಅಪ್ಪುಗೆ ಮರಣೋತ್ತರ ಪ್ರಶಸ್ತಿ ನೀಡುವ ಬಗ್ಗೆಯೂ ಸಾಕಷ್ಟು ಮನವಿಗಳು ಕೇಳಿ ಬಂದಿತ್ತು. ಅಭಿಮಾನಿಗಳ ಒತ್ತಾಸೆಯೂ ಅದೆ ಆಗಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಆ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಯಾವ ಪ್ರಶಸ್ತಿ ಗೌರವಗಳಿಗಿಂತಲೂ
ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ
ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಪ್ರಧಾನಿಗೆ ಟ್ಯಾಗ್ ಮಾಡಿದ್ದಾರೆ.
ಯಾವ ಪ್ರಶಸ್ತಿ ಗೌರವಗಳಿಗಿಂತಲೂ
ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ
ಪ್ರೀತಿ-ಅಭಿಮಾನ ದೊಡ್ಡದು.ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು
ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ.@PMOIndia pic.twitter.com/Zll2NtpRPs— Siddaramaiah (@siddaramaiah) November 1, 2021
ಇನ್ನು ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದರು. ಪುನೀತ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂಬ ಒತ್ತಾಯಗಳು ಕೇಳಿ ಬರುತ್ತಿವೆ. ಉಪಚುನಾವಣೆಯ ಫಲಿತಾಂಶ ಮುಗಿದ ಮೇಲೆ ಆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.