ಅಲ್ಪಸಂಖ್ಯಾತರ ಮತಕ್ಕಾಗಿ ಹಲ್ಲುಗಿಂಜುವ ಮಾಜಿ ಸಿಎಂಗಳು: ಅರಗ ಜ್ಞಾನೇಂದ್ರ

suddionenews
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲುಗಿಂಜುತ್ತಿದ್ದಾರೆ ಇದೇ ಕಾರಣಕ್ಕಾಗಿ ಅವರಿಬ್ಬರೂ ಆರ್‍ಎಸ್‍ಎಸ್ ವಿಚಾರದಲ್ಲಿ ಆಕ್ಷೇಪಣಾರ್ಹ ಟೀಕೆ ಮಾಡುವಲ್ಲಿ ಸ್ಫರ್ಧೆಗಿಳಿದಿದ್ದಾರೆ ಎಂದು ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ತಿಳಿಸಿದರು.

ಈ ವೇಳೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿಗಳಿಬ್ಬರ ಉದ್ದೇಶ ಎಲ್ಲರಿಗೂ ಸ್ಪಷ್ಟವಾಗಿ ಗೊತ್ತಾಗಿದೆ. ಅಲ್ಪಸಂಖ್ಯಾತರ ಮತ ಪಡೆಯಲು ಅವರಿಬ್ಬರೂ ಸ್ಫರ್ಧೆಗಿಳಿದಿದ್ದಾರೆ. ಆರ್ ಎಸ್‍ಎಸ್ ವಿಶ್ವದಲ್ಲಿ ಅತೀ ದೊಡ್ಡ ಸ್ವಯಂ ಸೇವಾ ಸಂಘಟನೆ ಎಂಬುದು ಅವರಿಬ್ಬರಿಗೂ ಗೊತ್ತಿದೆ ಎಂದು ತಿಳಿಸಿದರು.

ಬಿನ್ನಿ ಮಿಲ್ ಭಾಗದಲ್ಲಿ 10 ಸಾವಿರ ಪೊಲೀಸ್ ಕ್ವಾರ್ಟರ್‍ಸ್ ನಿರ್ಮಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಈ ಕಟ್ಟಡಗಳ ನಿರ್ಮಾಣವಾದರೆ ಪೊಲೀಸರ ವಸತಿ ಸಮಸ್ಯೆ ಬಹುತೇಕ ನಿವಾರಣೆಯಾಗಲಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಕೆಲವೆಡೆ ಪೊಲೀಸ್ ವಸತಿ ಗೃಹಗಳು ಇದ್ದರೂ ಪೊಲೀಸರು ಅಲ್ಲಿ ವಾಸಿಸುತ್ತಿಲ್ಲ. ಎಚ್‍ಆರ್‍ಎ (ಬಾಡಿಗೆ ಭತ್ಯೆ) ಹೆಚ್ಚು ಪ್ರಮಾಣದಲ್ಲಿ ಸಿಗುತ್ತಿರುವುದೇ ಇದಕ್ಕೆ ಕಾರಣ ಎಂದರು.

ಹಿಂದೆ ವರ್ಷಕ್ಕೆ ಐದಾರು ಪೊಲೀಸ್ ಸ್ಟೇಷನ್ ನಿರ್ಮಿಸಲಾಗುತ್ತಿತ್ತು. ಕಳೆದೆರಡು ವರ್ಷಗಳಲ್ಲಿ 100 ಪೊಲೀಸ್ ಸ್ಟೇಷನ್‍ಗಳ ನಿರ್ಮಾಣಕ್ಕೆ 200 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಅವರು ವಿವರಿಸಿದರು.

Share This Article
Leave a Comment

Leave a Reply

Your email address will not be published. Required fields are marked *