Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ದರ್ಶನ್ ಅಭಿಮಾನಿ‌ ಅಲ್ವಾ..? ಪವಿತ್ರಾಗೆ ಮೆಸೇಜ್ ಹಾಕಿದ್ದೇಕೆ..? ಮೃತನ ಹೆಂಡತಿ ಸಹನಾ ಅಳಲೇನು..?

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ. 11 : ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್ ಗ್ಯಾಂಗ್ ಕೊಲೆ ಮಾಡಿದೆ. ಈ ಕೊಲೆಯ ಆರೋಪದ ಮೇಲೆ ಈಗಾಗಲೇ ದರ್ಶ‌ನ್ ಸೇರಿದಂತೆ ಹದಿಮೂರು ಜನರನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆಯಾದ ಬಳಿಕ ಆತ ಪಕ್ಕಾ ದರ್ಶನ್ ಫ್ಯಾನ್ ಎಂದು ಸುದ್ದಿಯಾಗಿತ್ತು. ಪವಿತ್ರಾ ಗೌಡ, ದರ್ಶನ್ ಜೊತೆಗಿನ ಫೋಟೋಗಳನ್ನು ಹಾಕಿದ್ದಕ್ಕೆ ಕೋಪಗೊಂಡು ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬ ಮಾತುಗಳು ಇದಾವೆ. ಆದರೆ ಇದೀಗ ಅವರ ಹೆಂಡತಿಯೇ ನನ್ನ ಗಂಡ ದರ್ಶನ್ ಅಭಿಮಾನಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಮಾತಮಾಡಿ, ನನ್ನ ಪತಿ ದರ್ಶನ್ ಅಭಿಮಾನಿಯಾಗಿರಲಿಲ್ಲ. ನಾನು ಮದುವೆಯಾಗಿ ಒಂದು ವರ್ಷ ಪೂರೈಸಿದೆ ಅಷ್ಟೆ. ಇದೀಗ ನಾನು  ಗರ್ಭಿಣಿಯಾಗಿದ್ದೀನಿ. ಈ ಮಗುವಿನ ಜವಾಬ್ದಾರಿ ಯಾರದು ಎಂದು ಪ್ರಶ್ನೆ ಮಾಡಿದ್ದಾರೆ.

ನನ್ನ ಗಂಡನನ್ನು ಹತ್ಯೆ ಮಾಡಿದ್ದಾರೆ. ಈ ಕೊಲೆಗೆ ಹಾಗೂ ನನಗೆ ನ್ಯಾಯ ಕೊಡಿಸಿ. ಪತಿಯನ್ನು  ಕಳೆದುಕೊಂಡಿದ್ದೀನಿ. ಹೀಗೆ ಆಗಬಾರದಿತ್ತು. ನಾನು ಗರ್ಭಿಣಿ. ಇಂತಹ ಸಮಯದಲ್ಲಿ ನನ್ನ ಗಂಡ ಇಲ್ಲ. ನಾನು ಈಗ ಏನು ಮಾಡಲಿ. ಮೊನ್ನೆಯಷ್ಟೇ ಕರೆ ಮಾಡಿ ಮಾತಾಡಿದ್ದರು. ಅದೇ ಕೊನೆಯ ಕರೆ. ನಾನು ಗಂಡನನ್ನು ಕಳೆದುಕೊಂಡಿದ್ದು, ಮುಂದಿನ ನನ್ನ ಜೀವನ ನಿರ್ವಹಣೆ ಹೇಗೆ ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ನನ್ನ ಗಂಡನನ್ನು ನಟ ದರ್ಶನ್ ಅವರು ಕೊಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಅವರಿಗೆ ನ್ಯಾಯ ಕೊಡಿಸಲು ಸಾಕಷ್ಟು ಜನ ಮುಂದೆ ಬಂದಿದ್ದಾರೆ. ನನ್ನ ಮಗುವಿಗೆ ಯಾರು ಸಹಾಯ ಮಾಡುತ್ತಾರೆ. ನಮಗೆ ನ್ಯಾಯ ಕೊಡಿಸಿ. ನನ್ನ ಗಂಡನ ಸಾವಿಗೆ ನ್ಯಾಯ ಕೊಡಿಸಿಎಂದು ಮೃತನ ಪತ್ನಿ ಸಹನಾ ಅಂಗಲಾಚಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment