ದಾವಣಗೆರೆ : ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಹಾಗೂ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ನೇರ ಸಂಪರ್ಕ ಏರ್ಪಡಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ವತಿಯಿಂದ ಯುವ ಉದ್ಯೋಗ ಸೇತು ಎಂಬ ಏಕೀಕೃತ ಡಿಜಿಟಲ್ ಪೋರ್ಟಲ್‌ನ್ನು ಅನುಷ್ಠಾನಗೊಳಿಸಲಾಗಿದೆ.
ಈ ಪೋರ್ಟಲ್ ಮೂಲಕ ಉದ್ಯೋಗಾಕಾಂಕ್ಷಿಗಳು ತಮ್ಮ ಅರ್ಹತೆ ಮತ್ತು ಕೌಶಲ್ಯಗಳಿಗೆ ಅನುಗುಣವಾಗಿ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅನುಕೂಲ ಕಲ್ಪಿಸಲಾಗಿದೆ. ಆದ್ದರಿಂದ ಆಸಕ್ತ ನಿರುದ್ಯೋಗಿ ಯುವಜನತೆ https://yuvaudyogasethu.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.
ವಿಶೇಷವಾಗಿ ಯುವನಿಧಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ಫಲಾನುಭವಿಗಳು ಯುವ ಉದ್ಯೋಗ ಸೇತು ಪೋರ್ಟಲ್‌ನಲ್ಲಿಯೂ ನೋಂದಣಿ ಮಾಡಿಕೊಳ್ಳಬೇಕು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ , ಜಿಲ್ಲಾಡಳಿತ ಭವನ, ದಾವಣಗೆರೆ (ಮೊಬೈಲ್:9611396106) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಅವರು ತಿಳಿಸಿದ್ದಾರೆ.









