Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಡಿಕೆಧಾರಣೆ ಭರ್ಜರಿ ಏರಿಕೆ : ಇಂದಿನ ಮಾರುಕಟ್ಟೆ ದರ ಎಷ್ಟಿದೆ..?

---Advertisement---

 

ಬೆಂಗಳೂರು; ಅಡಿಕೆ ಬೆಳೆಗಾರರಿಗೆ ಬೆಲೆ ಏರಿಕೆಯಾದಷ್ಟು ಖುಷಿಯೋ ಖುಷಿ. ಇದೀಗ ಕಳೆದ ಎರಡು ತಿಂಗಳಿಗೆ ಹೋಲಿಕೆ ಮಾಡಿದರೆ ಅಡಿಕೆಧಾರಣೆ ಮಾರ್ಚ್ ನಲ್ಲಿ ತುಸು ಏರಿಕೆಯಾಗಿದೆ. ಚನ್ನಗಿರಿ, ಹೊನ್ನಾಳಿ, ದಾವಣಗೆರೆ ಸೇರಿದಂತೆ ಹಲವು ಭಾಗದಲ್ಲಿ ಅಡಿಕೆಯ ಬೆಲೆ ಹೆಚ್ಚಾಗಿದೆ. ಹಬ್ಬದ ಸಂಭ್ರಮದಲ್ಲಿರೋ ಬೆಳೆಗಾರರಿಗೆ ಈಗ ಮತ್ತೆ ಅಡಿಕೆ ಬೆಲೆ ಹೆಚ್ಚಳ ಮತ್ತಷ್ಟು ಸಿಹಿಸ ತಿನ್ನುವಂತೆ ಮಾಡಿದೆ.

ದಾವಣಗೆರೆ ಜಿಲ್ಲೆಯಲ್ಲಿ ಕ್ವಿಂಟಾಲ್ ಅಡಿಕೆ ಬೆಲೆ ಗರಿಷ್ಠ ದರ 53,589 ರೂಪಾಯಿ ಆಗಿದೆ. ಚನ್ನಗಿರಿ ರಾಶಿ ಅಡಿಕೆ ಧಾರಣೆ ಕ್ವಿಂಟಾಲ್ ಗೆ ಗರಿಷ್ಠ ದರ 53,589 ರೂಪಾಯಿ, ಕನಿಷ್ಠ ದರ 49,212 ರೂಪಾಯಿ ಇದ್ದು, ಸರಾಸರಿ ಬೆಲೆ 51,810 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 25,786 ರೂಪಾಯಿ, ಕನಿಷ್ಠ ದರ 18,387 ರೂಪಾಯಿ, ಸರಾಸರಿ ದರ 23,267 ರೂಪಾಯಿ ಆಗಿದೆ. ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಇನ್ನು ಮಾರ್ಚ್ ಎರಡನೇ ವಾರವೂ 53,000 ಗಡಿ ದಾಟಿದ್ದು, ಬಳಿಕ ಇಳಿಕೆಯಾಗಿತ್ತು. ಆದರೆ ಇದೀಗ ಮತ್ತೆ ಮಾರ್ಚ್‌ ಅಂತ್ಯದಲ್ಲಿ ಏರಿಕೆಯಾಗಿದೆ.

ಈ ಬಾರಿ ಉತ್ತಮ ಮಳೆಯಾಗಿದ್ದ ಕಾರಣ ಬೆಳೆಯನ್ನ ರೈತರು ಕಾಪಾಡಿಕೊಂಡರು. ಆದರೆ ಮಳೆಯೇ ಇಲ್ಲದ ಸಮಯದಲ್ಲಿ ಗಿಡಗಳನ್ನ ಕಾಪಾಡಿಕೊಳ್ಳುವುದಕ್ಕೆ ರೈತರು ಕೂಡ ಹರಸಾಹಸ ಸಿನಿಮಾಗಳನ್ನು ಪಟ್ಟಿದ್ದಾರೆ. ಅದರಲ್ಲೂ ತೆಂಗಿಗೆ ಕೀಟಗಳ ಸಮಸ್ಯೆಯೂ ಸಾಕಷ್ಟು ಕಾಟ‌ಕೊಟ್ಟಿದೆ. ಈ ಎಲ್ಲಾ ಸಮಸ್ಯೆಗಳನ್ನು ಪಕ್ಕಕ್ಕೆ ಸರಿಸಿ ರೈತರು ಬೆಳೆಯನ್ನು ಬೆಳೆದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment