Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಿ : ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,ಏ.19 : ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ನಗರದ ಬಟ್ಟೆ ಅಂಗಡಿಯಲ್ಲಿ ಜೊತೆಯಲ್ಲೇ ಕೆಲಸ ಮಾಡುವ ಯುವತಿ ಒಬ್ಬಳನ್ನು ಮನೆಯ ಹತ್ತಿರ ಬಿಡಲು ಹೋದ ಸಂದರ್ಭದಲ್ಲಿ ಏಕಾಏಕಿ ಮುಸ್ಲಿಂ ಯುವಕರು ಹಿಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದರು.

ಕಳೆದ ಕೆಲವು ತಿಂಗಳಿಂದ ಜಿಹಾದಿ ಮಾನಸಿಕತೆಯ ಯುವಕರು ಮಿತಿಮೀರಿ ವರ್ತಿಸುತ್ತಿದ್ದು, ಬೆಂಗಳೂರಿನ ನಗರ ಪೇಟೆಯಲ್ಲಿ ಅನುಮಾನ್ ಚಾ ಲೀಸ ಹಾಕಿದ. ಮುಸಲ್ಮಾನ್ ಯುವಕರು ಮನಸೋಯಿಚ್ಚೆಯಂತೆ ಹಲ್ಲೆ ಮಾಡಿದ್ದಾರೆ. ಅದೆ ರೀತಿ ಬೆಂಗಳೂರಿನ ಬನಶಂಕರಿ ಭಾಗದಲ್ಲಿ ಮುಸ್ಲಿಂ ಯುವಕರು ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ. ಕಳೆದ 2 ದಿನಗಳ ಹಿಂದೆ ಚನ್ನಗಿರಿಯ ನಲ್ಲೂರಿನಲ್ಲಿ ರಾಮನವಮಿ ಆಚರಣೆ ಮಾಡುವ ಸಂದರ್ಭದಲ್ಲಿ ಜಿಹಾದಿಗಳು ಹಿಂದುಗಳ ಹಲ್ಲೆ ಮಾಡಿದ್ದಾರೆ.

ಅದೇ ರೀತಿ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಬಲೆಗೆ ಕಾರಣ ಹಿಂದೂ ಯುವತಿಯನ್ನ ಮುಸ್ಲಿಂ ಯುವಕನೊರ್ವ 9 ಬಾರಿ ಆಕೆಯನ್ನು ಹಿರಿದು ಕೊಂದಿದ್ದಾನೆ. ಮೊನ್ನೆ ಬೆಂಗಳೂರಿನಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಕಾರಣ ಪ್ರತಿಯಾಗಿ ಅಲ್ಲಾ ಹೂ ಅಕ್ಟರ್ ಎಂದು ಹೇಳಬೇಕೆಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ ಎಂದಿದ್ದಾರೆ.

ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದನ್ನು ಕಂಡು ಜಿಹಾದಿ ಮಾನಸಿಕತೆಯ ಯುವಕರನ್ನು 2 ದಿನಗಳಲ್ಲಿ ಬಂಧಿಸದಿದ್ದರೆ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹಿಸುತ್ತದೆ.

ಈ ಸಂದರ್ಭದಲ್ಲಿ ಸರ್ದಾರ್ ಸೇವಾಲಾಲ್ ಶ್ರೀಗಳು, ವಿಶ್ವ ಹಿಂದು ಪರಿಷತ್‍ನ ರುದ್ರೇಶ್ ಭಜರಂಗ ದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಯೋಜಕ ಪ್ರಭಂಜನ್, ಬಿಜೆಪಿ ಮುಖಂಡ ಡಾ.ಸಿದ್ಧಾರ್ಥ, ಗುಂಡಾರ್ಪಿ, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬದರಿನಾಥ್, ಟೈಗರ್ ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment