ಶಾಸಕ ಬಿ.ಪಿ.ಹರೀಶ್‍ಕುಮಾರ್ ರನ್ನು ಕೂಡಲೇ ಬಂಧಿಸಿ : ಕರುನಾಡ ವಿಜಯಸೇನೆ ಒತ್ತಾಯ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 03 : ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‍ರನ್ನು ಪೆಮೋರಿಯನ್ ನಾಯಿ ಎಂದು ಕೀಳಾಗಿ ಮಾತನಾಡಿರುವ ಹರಿಹರ ಶಾಸಕ ಬಿ.ಪಿ.ಹರೀಶ್‍ಕುಮಾರ್ ರವರ ಮೇಲೆ ಎಫ್.ಐ.ಆರ್.ದಾಖಲಿಸಿ ಕೂಡಲೆ ಬಂಧಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಬುಧವಾರ ಪ್ರತಿಭಟನೆ ನಡೆಸಿ ಹೆಚ್ಚುವರಿ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಕೆಗೂ ಮುನ್ನ ರಕ್ಷಣಾಧಿಕಾರಿ ಕಚೇರಿಯ ಹೊರಗೆ ಶಾಸಕ ಬಿ.ಪಿ.ಹರೀಶ್ ಭಾವಚಿತ್ರ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಪ್ರಧಾನಿಯಿಂದ ಹಿಡಿದು ಜನಸಾಮಾನ್ಯರಿಗೆ ರಕ್ಷಣೆ ನೀಡುವ ಪೊಲೀಸರಿಗೆ ಅವರದೆ ಆದ ಗೌರವವಿರುತ್ತದೆನ್ನುವುದನ್ನು ಮರೆತಿರುವ ಹರಿಹರ ಶಾಸಕ ಬಿ.ಪಿ.ಹರೀಶ್‍ಕುಮಾರ್ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಬಗ್ಗೆ ಹಗುರುವಾಗಿ ಮಾತನಾಡಿರುವುದು ಅವರ ಘನತೆಗೆ ತಕ್ಕುದಲ್ಲ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಉಪಾಧ್ಯಕ್ಷರುಗಳಾದ ರತ್ನಮ್ಮ, ಮುಜಾಹಿದ್, ನಗರಾಧ್ಯಕ್ಷ ಅವಿನಾಶ್, ಕಾರ್ಯದರ್ಶಿ ಜಗದೀಶ್ ವಿದ್ಯಾರ್ಥಿ ಘಟಕದ ಅಖಿಲೇಶ್, ವಿಜಯಬಾಬು ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks