ಬೆಂಗಳೂರು: ಕಾಂಗ್ರೆಸ್ ನಾಯಕರ ಆರೋಪದ ಬೆನ್ನಲ್ಲೇ ಚಿಲುಮೆ ಸಂಸ್ಥೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಎಲ್ಲಾ ರೀತಿಯಿಂದಾನು ನೋಡಿದಾಗ ಗೋಲ್ಮಾಲ್ ಆಗಿದೆ ಎಂಬುದು ತಿಳಿದು ಬಂದಿದೆ. ಬಹಳಷ್ಟು ಜನ ಮತದಾರರ ಪಟ್ಟಿಯಿಂದ ಹೆಸರು ಡಿಲಿಟ್ ಆಗಿರುವುದನ್ನು ಜನ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಗೋಲ್ಮಾಲ್ ನಡೆದಿರುವ ಘಟನೆ ನಡೆದಿದೆ.
ಮಾಹಿತಿಯ ಅನ್ವಯ ನಾಲ್ವರನ್ನು ವಶಕ್ಕೆ ಪಡೆದಿರುವ ಹಲಸೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಧರ್ಮೇಶ್, ರಕ್ಷಿತ್, ರಾಕೇಶ್ ಎಂಬುವವರನ್ನು ಬಂಧಿಸಲಾಗಿದೆ. ಚಿಲುಮೆ ವರ್ಕ್ ಮಾಡುತ್ತಿದ್ದ ಕಚೇರಿಯ ಮೇಲೆಯೂ ದಾಳಿ ನಡೆಸಲು ಪ್ಲ್ಯಾನ್ ನಡೆಸಿದೆ. ಚಿಲುಮೆ ಸಂಸ್ಥೆ ಮತದಾರರ ಖಾಸಗಿ ಮಾಹಿತಿಯನ್ನು ಪಡೆದು, ಬೇರೊಂದು ಕಡೆ ನೀಡುತ್ತಿದ್ದರು ಎಂಬ ಆರೋಪ ಇತ್ತು.
ಈ ಸಂಬಂಧ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ವರದಿ ಸಲ್ಲಿಕೆ ಮಾಡಿದೆ. ವೋಟರ್ ಐಡಿ ಹಾಗೂ ಆಧಾರ್ ಲಿಂಕ್ ಮಾಡುವುದಕ್ಕೆ ಮಾತ್ರ ಚಿಲುಮೆ ಸಂಸ್ಥೆಗೆ ನೀಡಲಾಗಿತ್ತು. ಅದನ್ನು ಉಚಿತವಾಗಿ ಮಾಡಿಕೊಡುತ್ತೀವಿ ಎಂದು ಹೇಳಿದ್ದರು. ಆದ್ರೆ ಚಿಲುಮೆ ಸಂಸ್ಥೆ ಮಾಡಿದ್ದು ಮತದಾರರ ಪಟ್ಟಿಯನ್ನೇ ಪರಿಷ್ಕರಣೆ ಮಾಡಿದ್ದಾರೆ. ಈ ಕೆಲಸಕ್ಕೆ ಕೆಲವು ಅಧಿಕಾರಿಗಳು ಕೂಡ ಸಹಾಯ ಮಾಡಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರು, ಬೆಂಗಳೂರು ಉಸ್ತುವಾರಿಯನ್ನು ವಹಿಸಿಕೊಂಡಿರುವ ಸಿಎಂ ಬೊಮ್ಮಾಯಿ ಹಾಗೂ ಸಷಿವ ಅಶ್ವತ್ಥ್ ನಾರಾಯಣ್ ಅವರ ಮೇಲೆ ಆರೋಪ ಮಾಡಿದ್ದಾರೆ. ಇವರ ಗಮನಕ್ಕೆ ಬಾರದೆ ಈ ರೀತಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.