Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್.ಶಾಸಕ ಹೆಚ್.ಡಿ.ರೇವಣ್ಣ ಇವರುಗಳನ್ನು ಕೂಡಲೆ ಬಂಧಿಸಿ ಕಾನೂನು ರೀತಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ನಂದಿನಿಗೌಡ ಒತ್ತಾಯಿಸಿದ್ದಾರೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡಿರುವ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಇವರುಗಳ ಲೈಂಗಿಕ ಹಗರಣದ ಜಾಡು ಹಿಡಿದು ಎಸ್.ಐ.ಟಿ. ಸೂಕ್ತ ತನಿಖೆ ನಡೆಸಿದರೆ ಇನ್ನೆಷ್ಟು ವಿವಾಹಿತ ಮಹಿಳೆಯರು ಹಾಗೂ ಯುವತಿಯರು ಬಲಿಯಾಗಿದ್ದಾರೆನ್ನುವುದು ಬಹಿರಂಗವಾಗುತ್ತದೆ.

ನಮ್ಮದು ಜಾತ್ಯಾತೀತ ಪಕ್ಷವೆಂದು ಹೇಳಿಕೊಳ್ಳುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಕುಟುಂಬದಲ್ಲಿಯೇ ಇಂತಹ ಅನಾಚಾರ ನಡೆಯುತ್ತಿರುವುದರಿಂದ ರಾಜ್ಯದ ಜನ ನಾಚಿ ತಲೆ ತಗ್ಗಿಸುವಂತಾಗಿದೆ. ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾಗಿ ಜರ್ಮನಿಯಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ರಾಜ್ಯಕ್ಕೆ ಕರೆ ತಂದು ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲವಾದಲ್ಲಿ ಮಹಿಳಾ ಕಾಂಗ್ರೆಸ್‍ನಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಶ್ರೀಮತಿ ಗೀತ ನಂದಿನಿಗೌಡ ಎಚ್ಚರಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment