Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಪೊಲೀಸರ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯಿದೆಯಡಿ ಬಂಧಿಸಿ : ಕರುನಾಡ ವಿಜಯಸೇನೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 05 : ಪೊಲೀಸರ ಮೇಲೆ ಹಲ್ಲೆ ನಡೆಸಿರುವವರನ್ನು ಗೂಂಡಾ ಕಾಯಿದೆಯಡಿ ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ನಾಲ್ಕು ದಿನಗಳ ಹಿಂದೆ ಸರ್ಕಾರಿ ಕಲಾ ಕಾಲೇಜು ಮುಂಭಾಗದ ರಸ್ತೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಭರತ್‍ರೆಡ್ಡಿ ಮತ್ತು ಸಹಚರರನ್ನು ಬಂಧಿಸಿ ಯಾವುದೆ ರೀತಿಯ ಕೇಸು ದಾಖಲಿಸಿದೆ ಕೈಬಿಟ್ಟಿರುವುದನ್ನು ನೋಡಿದರೆ ನಾಗರೀಕರಿಗೆ ಯಾವ ರೀತಿಯ ರಕ್ಷಣೆ ನೀಡಬಲ್ಲರು ಎಂಬ ಅನುಮಾನ ಕಾಡುತ್ತಿದೆ. ಪ್ರಮುಖ ಆರೋಪಿ ಭರತ್‍ರೆಡ್ಡಿ ಮತ್ತು ಸಹಚರರು ಜಿಲ್ಲಾ ಉಸ್ತುವಾರಿ ಸಚಿವರ ಹಿಂಬಾಲಕರುಗಳೆಂದು ಹೇಳಲಾಗುತ್ತಿದ್ದು, ರಾಜಕೀಯ ಒತ್ತಡಕ್ಕೆ ಪೊಲೀಸ್ ಇಲಾಖೆ ಮಣಿದಿರಬಹುದೆ ಎಂಬ ಅನುಮಾನ ಕಾಡುತ್ತಿದೆ.

ಪೊಲೀಸರ ಮೇಲೆ ಹಲ್ಲೆ ನಡೆಸಿರುವ ನಾಲ್ಕರ ಪೈಕಿ ಬಡಾವಣೆ ಠಾಣೆಯಲ್ಲಿ ಮೂವರ ವಿರುದ್ದ ಎಫ್.ಐ.ಆರ್.ದಾಖಲಾಗಿದ್ದು, ಭರತ್‍ರೆಡ್ಡಿಯನ್ನು ಕೈಬಿಟ್ಟಿರುವುದು ಯಾವ ಪುರುಷಾರ್ಥಕ್ಕೆ? ಪೊಲೀಸರಿಗೆ ಹೆಚ್ಚಿನ ಅಧಿಕಾರ ಮತ್ತು ರಕ್ಷಣೆ ನೀಡುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

 

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಜಗದೀಶ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ನಾಗರಾಜ್‍ಮುತ್ತು, ಮಧು, ಅಖಿಲೇಶ್, ಶಶಿ, ಮಧುಸೂದನ್, ಅವಿನಾಶ್, ನಾಗೇಶ್ ಇವರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Join WhatsApp

Join Now

Join Telegram

Join Now

Leave a Comment