ಸುದ್ದಿಒನ್, ಬೆಂಗಳೂರು, ಡಿ.03 :ಐದನೇ ಟಿ20ಯಲ್ಲಿ ಟೀಂ ಇಂಡಿಯಾ ಜಯಭೇರಿ ಬಾರಿಸಿತು. ಕೊನೆಯ
ಓವರ್ ನಲ್ಲಿ ಆಸೀಸ್ ಗೆಲುವಿಗೆ 10 ರನ್ ಬೇಕಿದ್ದಾಗ ಆರ್ಷದೀಪ್ ಮ್ಯಾಜಿಕ್ ಮಾಡಿದರು. 6 ಎಸೆತಗಳಲ್ಲಿ ವಿಕೆಟ್ ಪಡೆದು ಕೇವಲ ಮೂರು ರನ್ ನೀಡಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆಸೀಸ್ ಬೌಲರ್‌ಗಳ ಅಬ್ಬರದಿಂದ ಭಾರತ ನಿಗಧಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು.

ಭಾರತದ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಅಯ್ಯರ್ (53) ಮಾತ್ರ ಅರ್ಧಶತಕ ದಾಖಲಿಸಿದರು.
ಯಶಸ್ವಿ (21), ಜಿತೇಶ್ ಶರ್ಮಾ (24) ಮತ್ತು ಅಕ್ಷರ್ ಪಟೇಲ್ (31) ಸಾಧಾರಣ ಸ್ಕೋರ್ ಗಳಿಸಿದರು. ಆಸೀಸ್ ಬೌಲರ್‌ಗಳಲ್ಲಿ ಬೆಹ್ರೆನ್‌ಡಾರ್ಫ್ ಮತ್ತು ಡುಶುಯಿಸ್ ತಲಾ 2 ವಿಕೆಟ್ ಪಡೆದರು. ಆರೋನ್ ಹಾರ್ಡಿ, ನಾಥನ್ ಇಲಿಸ್ ಮತ್ತು ತನ್ವೀರ್ ಸಂಗ ತಲಾ ಒಂದು ವಿಕೆಟ್ ಪಡೆದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









