6ನೇ ತರಗತಿಯಿಂದಲೇ ಓಬವ್ವ ಆತ್ಮರಕ್ಷಣೆ ಕಲೆ : ಕೋಟಾ ಶ್ರೀನಿವಾಸ ಪೂಜಾರಿ
ವಿದ್ಯಾರ್ಥಿನಿಯರಿಗಾಗಿ ಶಾಲೆಯಲ್ಲಿ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಯನ್ನು ನೀಡಲಾಗುತ್ತದೆ. ಆ ತರಬೇತಿಯನ್ನು ಈ ವರ್ಷ ಆರನೇ ತರಗತಿಯಿಂದಲೇ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ತರಬೇತಿಯನ್ನು ಹಿಂದೆ ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿನಿಯರಿಗೆ ಮಾತ್ರ ನೀಡಲಾಗುತ್ತಿತ್ತು. ಈ ವರ್ಷದಿಂದ ಆರನೇ ತರಗತಿಯಿಂದಲೇ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನ 24 ಸಾವಿರ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮ ರಕ್ಷಣೆ ಕಲೆ ತರಬೇತಿ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪ್ರಿ ಮೆಟ್ರಿಕ್ ವಿದ್ಯಾರ್ಥಿನಿಯರು ಸೇರಿ ಒಟ್ಟು 50 ಸಾವಿರ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುವುದು. ಇದಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಖರ್ಚಾಗುತ್ತದೆ ಎಂದು ಹೇಳಿದರು.
ಕರ್ನಾಟಕ ವಸತಿ ಸಂಸ್ಥೆಯ 300 ಶಾಲೆಗಳಲ್ಲಿ ತಲಾ 100 ವಿದ್ಯಾರ್ಥಿನಿಯರಂತೆ ಒಟ್ಟು 30 ಸಾವಿರ ವಿದ್ಯಾರ್ಥಿನಿಯರು ಆತ್ಮ ರಕ್ಷಣಾ ಕಲೆ ತರಬೇತಿ ಪಡೆದಿದ್ದಾರೆ. ಈ ಸಾಲಿನಲ್ಲಿ ಹೆಚ್ಚುವರಿಯಾಗಿ 520 ವಸತಿ ಶಾಲೆಗಳ 82 ಸಾವಿರ ವಿದ್ಯಾರ್ಥಿನಿಯರು ತರಬೇತಿಗೆ ಒಳಪಡುತ್ತಾರೆ. ಒಟ್ಟು 1.15 ಲಕ್ಷ ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದಾರೆ. ಇದರ ಅಂದಾಜು ವೆಚ್ಚ ₹17 ಕೋಟಿ ಆಗಲಿದೆ ಎಂದು ತಿಳಿಸಿದ್ದಾರೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…