Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಲಾವಿದರು ಬದುಕು ಎಷ್ಟೇ ಸಂಕಷ್ಟದಲ್ಲಿದ್ದರೂ ಕಲೆಯಿಂದ ಸಮಾಜದ ಸಂಕಷ್ಟಗಳನ್ನು ಮರೆಸಿ, ಮನರಂಜಿಸುತ್ತಾರೆ : ತಹಶೀಲ್ದಾರ್ ಎನ್. ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ : ನಾಟಕವು ಎಲ್ಲವನ್ನೂ ಒಳಗೊಂಡ ಸಮಗ್ರ ಕಲೆಯಾಗಿದ್ದು, ಇದನ್ನು ಪ್ರತಿಯೊಬ್ಬರು ಸ್ವೀಕರಿಸುವಂತಾಗಬೇಕು. ಸಮಾಜದ ಹುಳುಕುಗಳನ್ನು ಎತ್ತಿ ತೋರಿಸುವ, ಸಮಾಜದ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಮರ್ಥ್ಯ‌ ನಾಟಕಗಳಿಗಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.

ತಾಲೂಕಿನ ತಳಕು ಹೋಬಳಿ ಬಂಜಗೆರೆ  ಗ್ರಾಮದಲ್ಲಿ ಕೃಪಪೊಷಕ ನಾಟಕ ಮಂಡಳಿ ಯುವಕರ ಸಂಘದ ವತಿಯಿಂದ ಗುರುವಾರ ನಡೆದ  “ಕುಡುಕ ಕಟ್ಟಿದ ಪ್ರೇಮಕೊಟೆ” ಸಾಮಾಜಿಕ ನಾಟಕ ದಲ್ಲಿ  ಅವರು  ಮಾತನಾಡಿ, ಎರಡು ವರ್ಷ ಕೋವಿಡ್ ಇದ್ದ ಕಾರಣ ನಾಟಕಗಳು ಸಂಪೂರ್ಣ ನಿಂತು ಹೋಗಿದ್ದವು. ಈಗ ಕೋವಿಡ್ ಕಡಿಮೆ ಆದ ಹಿನ್ನೆಲೆಯಲ್ಲಿ ಇಂದು ಎಲ್ಲೆಡೆ ನಾಟಕಗಳು ಕಳೆ ಕಟ್ಟಿವೆ. ನಾಟಕ ಪುರಾತನ ಗಂಡು ಕಲೆ. ರಂಗಭೂಮಿ ಬದುಕಿನ ಕನ್ನಡಿ ಹಾಗೂ ನೈಜ ಕಲೆಯಾಗಿದ್ದು, ಪ್ರೇಕ್ಷಕರೇ ಇದರ ಜೀವಾಳವಾಗಿದ್ದಾರೆ ಎಂದರು.

ಜಾಗತೀಕರಣ ಮತ್ತು ಅಧುನಿಕತೆಯ ಭರಾಟೆಯಲ್ಲಿ ನಮ್ಮ ಸಂಸ್ಕೃತಿಯ ಪ್ರತಿಬಿಂಬಗಳಾಗಿರುವ ನಾಟಕಗಳು ಇಂದು ಹೆಚ್ಚು ಜನರನ್ನು ತಲುಪುತ್ತಿಲ್ಲ. ಜನತೆ ಸಿನಿಮಾ, ಟಿವಿ ಕಡೆಗೆ ಆಕರ್ಷಿತರಾಗಿ ನಾಟಕಗಳನ್ನು ನೋಡುವುದನ್ನೇ ಕಡಿಮೆ ಮಾಡಿದ್ದಾರೆ ಎಂದು ವಿಷಾಧಿಸಿದ ಅವರು, ಸಿನಿಮಾ, ಧಾರವಾಹಿಗಳ ಪ್ರಭಾವ ಎಷ್ಟೇ ಬೀರಿದರೂ ನಾಟಕ ಎಂದಿಗೂ ಜೀವಂತವಾಗಿರುತ್ತದೆ.

ನಾಟಕಗಳನ್ನು ಜನರು ಹೆಚ್ಚು ಹೆಚ್ಚು ನೋಡಿದಾಗ ಮತ್ತು ಹೆಚ್ಚು ಹೆಚ್ಚು ಪ್ರದರ್ಶನಗಳಾದಾಗ ಮಾತ್ರ ನಾಟಕಗಳ ಸಾರ್ಥಕತೆ ಪಡೆಯುತ್ತವೆ. ಸಮಾಜದಲ್ಲಿ ಕಲಾವಿದರಿಗೆ ಉತ್ತಮ ಸ್ಥಾನಮಾನಗಳು ಸಿಗಬೇಕು. ಕಲಾವಿದರು ಬದುಕು ಎಷ್ಟೇ ಸಂಕಷ್ಟದಲ್ಲಿದ್ದರೂ ತಮ್ಮ ರಕ್ತಗತವಾದ ಕಲೆಯಿಂದ ಸಮಾಜದ ಸಂಕಷ್ಟಗಳನ್ನು ಮರೆಸಿ, ಮನರಂಜಿಸುತ್ತಾರೆ.

ಆಧುನಿಕ ಯುಗದ ಒತ್ತಡಗಳಿಗೆ ನಮ್ಮ ಸಾಂಪ್ರದಾಯಿಕ ಕಲಾ ಪ್ರಕಾರಗಳು ಅವನತಿಗೊಳ್ಳುತ್ತಿವೆ. ರಾಜ್ಯದಲ್ಲಿ ಹಿಂದೊಮ್ಮೆ ನಾಟಕಗಳು ಉಚ್ಛ್ರಾಯ ಸ್ಥಿತಿಯಲ್ಲಿದ್ದವು ಈಗ ಆ ಪರಿಸ್ಥಿತಿ ಇಲ್ಲವಾಗಿದೆ. ಅಳಿದುಳಿದ ಕೆಲವು ವೃತ್ತಿ ರಂಗಭೂಮಿ ಕಂಪನಿಗಳು ಈ ನಾಟಕದ ಪರಂಪರೆಯನ್ನು ಮುಂದುವರೆಸುತ್ತಿವೆ. ಇವರಿಗೆ ನಮ್ಮ ಸಹಕಾರ, ಪ್ರೋತ್ಸಾಹ ನೀಡಬೇಕಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ ಇಂಜಿನಿಯರ್ ನಾಗಭೂಷನ್, ಗುತ್ತಿಗೆದಾರ ಹನುಮಂತಪ್ಪ, ನಿವೃತ ಎಸಿಪಿ ಅಜ್ಜಪ್ಪ,,ದಾವಣಗೆರೆ ಬಸಣ್ಣ,ನಗರಸಭೆ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಮುಖಂಡರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!