Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಲರಾಮನ ಕೆತ್ತಿದ ಅರುಣ್ ಯೋಗಿರಾಜ್ ಗೆ ‘ಅಭಿನವ ಅಮರಶಿಲ್ಪಿ’ ಬಿರುದು

Facebook
Twitter
Telegram
WhatsApp

ಕಾರಾವಾರ: ಅರುಣ್ ಯೋಗಿರಾಜ್ ಎಂದರೆ ಈಗ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭವ್ಯ ರಾಮಮಂದಿರಲ್ಲಿ ಮುಗುಳ್ನಗು ಸೂಸುತ್ತ, ಭಕ್ತರನ್ನು ಕೈ ಬೀಸಿ ಕರೆಯುತ್ತಿರುವ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಅರುಣ್ ಯೋಗಿರಾಜ್ ಹೆಸರು ಈಗ ದೇಶಾದ್ಯಂತ ಅಜರಾಮರವಾಗಿದೆ. ಪ್ರತಿಯೊಬ್ಬರು ಅರುಣ್ ಯೋಗಿರಾಜ್ ಅವರ ಹೆಸರನ್ನು ನೆನಪಿಸಿಕೊಳ್ಳುತ್ತಾರೆ. ಅವರ ಸಾಧನೆಗೆ ಹಲವು ಪ್ರಶಸ್ತಿಗಳು ಬಂದಿವೆ. ಇದಿಒಗ ಮಹತ್ವದ ಪ್ರಶಸ್ತಿ ಒಂದು ಸಂದಿದೆ.

ಡಾ.ಹಿರೇಮಠ ಫೌಂಡೇಷನ್ ವತಿಯಿಂದ ಅರುಣ್ ಯೋಗಿರಾಜ್ ಅವರಿಗೆ ಪ್ರಶಸ್ತಿ ಸಿಕ್ಕಿದೆ. ಅಭಿನವ ಅಮರಶಿಲ್ಪಿ ಎಂಬ ಬಿರುದನ್ನು ನೀಡುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕನ್ವೇಷನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಈ ಬಿರುದು ನೀಡಿ, ಗೌರವಿಸಲಾಗಿದೆ. ಅರುಣ್ ಯೋಗಿರಾಜ್ ಅವರು ಕೆತ್ತಿರುವ ಬಾಲರಾಮನನ್ನು ಕಣ್ತುಂಬಿಕೊಳ್ಳಲು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಾರೆ. ಬಾಲರಾಮನನ್ನು ಕಣ್ತುಂಬಿಕೊಂಡು, ಧನ್ಯರಾಗುತ್ತಿದ್ದಾರೆ.

 

ಬೇಲೂರು ಮತ್ತು ಹಳೆಬೀಡಿನ ಐತಿಹಾಸಿಕ ದೇವಸ್ಥಾನಗಳಲ್ಲಿ ಸುಂದರ ಶಿಲ್ಪಗಳನ್ನು ಕೆತ್ತಿರುವ ಶಿಲ್ಪಿ ಜಕಣಾಚಾರಿಗೆ ಅಮರಶಿಲ್ಪಿ ಎಂಬ ಬಿರುದು ಹೊಂದಿದ್ದಾರೆ. ಅದಕ್ಕೆ ಸಮಾನಾರ್ಥವಾಗಿ ಅಯೋಧ್ಯೆಯ ರಾಮಮಂದಿರದ ಬಾಲಕ ರಾಮನ ಸುಂದರ ಮೂರ್ತಿಯನ್ನು ಕೆತ್ತಿರುವ ಮೈಸೂರು ಮೂಲದ ಅರುಣ್ ಯೋಗಿರಾಜ್‌ ಡಾ. ಹಿರೇಮಠ ಫೌಂಡೇಷನ್ ‘ಅಭಿನವ ಅಮರಶಿಲ್ಪಿ’ ಬಿರುದು ನೀಡಿ ಗೌರವಿಸಿತು. ಮೈಸೂರು ಜಿಲ್ಲೆಯ ಒಂದು ಹಳಿಯ ದಲಿತರ ಜಮೀನಿನಿಂದ ತೆಗೆದುಕೊಂಡು ಹೋಗಲಾಗಿದ್ದು, ಕೃಷ್ಣ ಶಿಲೆಯಲ್ಲಿ 51 ಇಂಚಿನ ರಾಮಲಲ್ಲಾನ ಮೂರ್ತಿಯನ್ನು ಅರುಣ್ ಯೋಗಿರಾಜ್ ಕೆತ್ತಿದ್ದರು. ಈ ವಿಗ್ರವನ್ನು ಕಳೆದ ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀರ್ಣ, ಮಲಬದ್ಧತೆ ಸಮಸ್ಯೆನ್ನು ಎಂದಿಗೂ ನಿರ್ಲಕ್ಷಿಸಬೇಡಿ : ಇದು ಹೃದಯಕ್ಕೆ ತೊಂದರೆ

ನಮ್ಮ ದೇಹದಲ್ಲಿ ಸಣ್ಣ ಪುಟ್ಟ ಸಮಸ್ಯೆಯಾದರೂ ಕೆಲವೊಂದು ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಸುಮಾರು ಜನಕ್ಕೆ ಅಜೀರ್ಣ ಹಾಗೂ ಮಲಬದ್ಧತೆಯ ಸಮಸ್ಯೆ ಕಾಡುತ್ತಿರುತ್ತದೆ. ಇದು ಕಾಮನ್ ತಾನೇ ಎಂದು ನಿರ್ಲಕ್ಷ್ಯ ಮಾಡಿದರೆ ಅದರಿಂದ ಮುಂದೆ ಹೃದಯಕ್ಕೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ

ಈ ರಾಶಿಯವರಿಗೆ ಅಡಚಣೆ ಸಮಸ್ಯೆದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆ: ಈ ರಾಶಿಯವರಿಗೆ ಒಳ್ಳೆಯ ಸಂಬಂಧ ಮದುವೆಗೆ ಒಲೆಯಲಿದೆ ಶುಕ್ರವಾರರಾಶಿ ಭವಿಷ್ಯ -ನವೆಂಬರ್-22,2024 ಸೂರ್ಯೋದಯ: 06:29, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

error: Content is protected !!