ಆರ್ಯ ವೈಶ್ಯ ಅಭಿವೃದ್ಧಿ ನಿಗಮ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ

1 Min Read

ಚಿತ್ರದುರ್ಗ. ಅ.27: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ kacdc.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು: ಸಿ.ಇ.ಟಿ, ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2% ಬಡ್ಡಿದರದಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ವಾರ್ಷಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/- ಗಳ ಮಿತಿಯೊಳಗಿರಬೇಕು.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆ: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿಬೇಕು, ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5%, ತೃತೀಯ ಲಿಂಗಗಳಿಗೆ ಶೇ.5% ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ 9448451111  ಹಾಗೂ ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವಿರಗಳನ್ನು  kacdc.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ.ಸಂಪತ್ ಕುಮಾರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *