ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯ : ಶ್ವೇತ

2 Min Read

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 24 : ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬಹುದೆಂದು ಮೊಳಕಾಲ್ಮುರು ತಾಲ್ಲೂಕು ಕೆ.ಕೆ.ಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕರ್ನಾಟಕ ರಾಜ್ಯ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕøತೆ ಎಸ್.ಬಿ.ಶ್ವೇತಾ ರೇವಣ್ಣ ಹೇಳಿದರು.

ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಶಾಖೆ ಹಾಗೂ ತಾಲ್ಲೂಕು ಶಾಖೆಗಳಿಗೆ ನೂತನವಾಗಿ ಆಯ್ಕೆಯಾಗಿರುವ ಮಾದಿಗ ಸಮುದಾಯದ ಪದಾಧಿಕಾರಿಗಳಿಗೆ ಕ್ರೀಡಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಜಾತಿ ವ್ಯವಸ್ಥೆಯಲ್ಲಿ ವೃತ್ತಿ ಜೀವನದಲ್ಲಿ ಅನೇಕ ಎಡರು-ತೊಡರುಗಳನ್ನು ಅನುಭವಿಸಿದ್ದೇನೆ. ಮಾದಿಗ ಸಮುದಾಯದ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಟ್ಟಾಗ ಮತ್ರ ಅವಕಾಶಗಳು ಲಭಿಸಲು ಸಾಧ್ಯ ಎಂದರು.

ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಗೌರವಾಧ್ಯಕ್ಷ ಕೆ.ಜಿ.ಜಗದೀಶ್ ಮಾತನಾಡಿ ಪರಿಶಿಷ್ಟ ಜಾತಿಯಲ್ಲಿ ಬಲಾಢ್ಯರ ನಡುವೆ ಮೀಸಲು ಕ್ಷೇತ್ರ ಸೌಲಭ್ಯ ಪಡೆಯಲು ವಿಫಲವಾಗಿರುವ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಹೋರಾಟಕ್ಕೆ ಮಾದಿಗ ನೌಕರರ ಬೆಂಬಲ ಅತ್ಯಗತ್ಯ ಎಂದು ಹೇಳಿದರು.

ಹೋರಾಟದಲ್ಲಿ ಮುಂಚೂಣಿಯಲ್ಲಿಲ್ಲದಿದ್ದರೂ ಹೋರಾಟಗಾರರಿಗೆ ಆತ್ಮಸ್ಥೈರ್ಯ ನೀಡಬೇಕೆಂದು ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪ ಮಾತನಾಡಿ ಮಾದಿಗ ಜನಾಂಗ ಸಮಾಜದಲ್ಲಿ ತನ್ನ ತನ ಉಳಿಸಿಕೊಳ್ಳಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಒಳ ಮೀಸಲಾತಿ ಅನುಷ್ಟಾನ ಕುರಿತು ಚರ್ಚಿಸಿ ಜಾಗೃತಿ ಮೂಡಿಸಬೇಕಿದೆ ಎಂದರು.

ವಾಣಿಜ್ಯ ಇಲಾಖೆ ಸಹಾಯಕ ಆಯುಕ್ತ ಎಂ.ನಾರಾಯಣಸ್ವಾಮಿ ಮಾತನಾಡುತ್ತ ಮಹಿಳೆಯ ಏಳಿಗೆಯಿಂದ ಮಾತ್ರ ಯಾವುದೇ ಸಮಾಜ, ಕುಟುಂಬ ಹಾಗೂ ದೇಶ ಅಭಿವೃದ್ದಿಯಾಗುತ್ತದೆ. ಹೆಣ್ಣನ್ನು ಕೇವಲ ಅಡುಗೆ ಮನೆಗೆ ಸೀಮಿತಗೊಳಿಸುವ ಬದಲು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಬೇಕೆಂದು ಕರೆ ನೀಡಿದರು.

ಮಾದಿಗ ನೌಕರರ ಸಂಘದ ಅಧ್ಯಕ್ಷ ಡಿ.ಜೆ.ಶ್ರೀನಿವಾಸ್, ಬಿ.ಸಿ.ಎಂ.ಇಲಾಖೆ ನಿವೃತ್ತ ಅಧಿಕಾರಿ ಜಗನ್ನಾಥ್, ಬಿ.ಸಿ.ಎಂ.ಅಧಿಕಾರಿ ರುದ್ರಮುನಿ, ನಿವೃತ್ತ ಪಿ.ಎಸ್.ಐ. ನಾಗರಾಜ್,
ದಯಾನಂದ್, ಕಾರ್ಯದರ್ಶಿ ತಿಪ್ಪೇಸ್ವಾಮಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಮಲ್ಲಿಕಾರ್ಜುನ, ಕೆ.ವೀರಣ್ಣ, ಶಿವಪ್ರಕಾಶ್, ಟಿ.ಎಸ್.ಬಸಣ್ಣ ಇವರುಗಳು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *