ರಾಜ್ಯಾಧ್ಯಕ್ಷನಾಗಿ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ : ಬಿವೈ ವಿಜಯೇಂದ್ರ

suddionenews
1 Min Read

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆ ಮಾಡುವುದು ನನ್ನ ಆದ್ಯ ಕರ್ತವ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೊಡ್ಡು ಬೆದರಿಕೆಗಳಿಗೆ ಹೆದರುವ ಪಕ್ಷ ಬಿಜೆಪಿಯಲ್ಲ. ರಾಜ್ಯಾಧ್ಯಕ್ಷನಾಗಿ ನಾನು ಕುಇಡ ಹೆದರುವುದಿಲ್ಲ. ಇವೆಲ್ಲವನ್ನೂ ನಾವೂ ಹೆದರಿಸುತ್ತೇವೆ. ಬಿಜೆಪಿ ಅಧ್ಯಕ್ಷನಾಗಿ ಪ್ರತಿಯೊಬ್ಬ ಕಾರ್ಯಕರ್ತನನ್ನು ರಕ್ಷಣೆ ಮಾಡುವುದು ನನ್ನ ಕರ್ತವ್ಯ ಎಂದಿದ್ದಾರೆ.

ಇದೆ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಗುಲ್ಬರ್ಗಾದಲ್ಲಿ ಮಣಿಕಂಠ ರಾಠೋಡ್ ಅವರು, ಮತ್ತೊಂದೆಡೆ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ವರದಿಯ ಆಧಾರದ ಮೇಲೆ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ಹೇಳಿದ್ದೆಲ್ಲವನ್ನು ಸತ್ಯವೆಂದು ನಂಬುವುದಿಲ್ಲ. ದಲಿತ ಮುಖಂಡನ ಮನೆಗೆ ಹೋಗಿ ಹೊರಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆದರೆ, ರಾಜ್ಯ ಸರಕಾರ, ಪೊಲೀಸರು 307ನೇ ವಿಧಿಯಡಿ ಕೊಲೆ ಯತ್ನದ ಪ್ರಕರಣ ದಾಖಲಿಸಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಎಂಎಲ್‍ಸಿ ಹೆಸರನ್ನು ಎ1 ಆರೋಪಿ ಎಂದು ಉಲ್ಲೇಖಿಸಿದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.

ಬರಗಾಲದ ಬಗ್ಗೆಯೂ ಮಾತಮಾಡಿದ ವಿಜಯೇಂದ್ರ ಅವೆಉ, ಈ ರಾಜ್ಯ ಸರ್ಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರುಗೆ ಪರಿಹಾರ ಕೊಡಬೇಕೆಂಬ ಪ್ರಾಮಾಣಿಕ ಕಳಕಳಿ ಇಲ್ಲ. ರೈತರಿಗೆ ಪರಿಹಾರ ನೀಡುತ್ತಿಲ್ಲ. ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲದೆ ಇದ್ದರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ತಿಳಿಸಿದ್ದಾರೆ. ಮತ್ತೊಂದು ಕಡೆ ಎಸ್‍ಸಿ, ಎಸ್‍ಟಿ ಸಮುದಾಯಕ್ಕಾಗಿ ಬಳಸಬೇಕಿದ್ದ ಎಸ್‍ಇಪಿಟಿಎಸ್‍ಪಿ ಹಣವನ್ನು ಬೇರೆಡೆಗೆ ಬಳಸಿಕೊಳ್ಳುತ್ತಾರೆ. ರಾಜ್ಯ ಸರಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಅದನ್ನು ಬಿಟ್ಟು ರಾಜಕಾರಣ ಮಾಡುವುದು, ಅಲ್ಪಸಂಖ್ಯಾತರನ್ನು ಓಲೈಸುವುದೇ ಅದರ ಪ್ರಥಮ ಆದ್ಯತೆಯಾಗಿದೆ ಎಂದು ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *