ವಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ : ವೀಕ್ಷಕರಿಂದ ಅಧಿಕೃತ ಘೋಷಣೆ

suddionenews
1 Min Read

ಸುದ್ದಿಒನ್, ಬೆಂಗಳೂರು. ನವೆಂಬರ್.17 :ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ಆರ್. ಅಶೋಕ ಅವರನ್ನು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ. 

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.ಸುನೀಲ್ ಕುಮಾರ್, ಅಶ್ವಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಹೆಸರುಗಳು ಕೂಡಾ ಈ ಸ್ಥಾನಕ್ಕೆ ಕೇಳಿ ಬಂದಿತ್ತು.

ರಾಜ್ಯ ಬಿಜೆಪಿಯಲ್ಲಿ ಖಾಲಿಯಿದ್ದ ಹುದ್ದೆಗಳೆಲ್ಲಾ ಫುಲ್ ಫಿಲ್ ಆಗಿದೆ. ಕಳೆದ ಆರು ತಿಂಗಳಿನಿಂದ ಬಿಜೆಪಿಯಲ್ಲಿ ಖಾಲಿಯಿದ್ದ
ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷನ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇತ್ತಿಚೆಗಷ್ಟೇ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಇದೀಗ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ.

ಇಂದು ದೆಹಲಿಯಿಂದ ವೀಕ್ಷಕರು ಬಂದಿದ್ದರು. ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ಪಡೆದು ಘೋಷಣೆ ಮಾಡಲಾಗಿದೆ.

ಈ ಮೂಲಕ ಒಕ್ಕಲಿಗರ ಸಮುದಾಯದವರಿಗೆ ಮಣೆ ಹಾಕಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಾಗಬಾರದು ಎಂಬ ಕಾರಣಕ್ಕೆ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ. ಇಂದು ವೀಕ್ಷಕರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಚುನಾವಣೆ ನಡೆದು ಸುಮಾರು ಆರು ತಿಂಗಳುಗಳ ನಂತರ ವಿರೋಧ ಪಕ್ಷದ ನಾಯಕರ ನೇಮಕವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ನಿಂದ ಬಿಜೆಪಿ ಟೀಕೆಗಳನ್ನು ಎದುರಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *