Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಆಶಾ ಕಾರ್ಯಕರ್ತರ ಅಹೋರಾತ್ರಿ ಧರಣಿ 2 ನೇ ದಿನಕ್ಕೆ : ಸುರಿಯುವ ಮಳೆಯಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 13 : ಮುಖ್ಯ ಮಂತ್ರಿಗಳು ಕೊಟ್ಟ ಮಾತಿನಂತೆ ಮಾಸಿಕ ಗೌರವಧನವನ್ನು 10,000/-ರೂ. ನಿಗದಿಗೊಳಿಸಬೇಕು. ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂಬ ಇನ್ನಿತರ ಬೇಡಿಕೆಗಳಿಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯ 2ನೇ ದಿನಕ್ಕೆ ಕಾಲಿಟ್ಟಿದ್ದು, ಸುರಿಯುತ್ತಿರುವ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಹೋರಾಟ ನಡೆಸಿದರು.

ನಗರದ ಒನಕೆ ಓಬವ್ವ ವೃತ್ತದ ಬಳಿ ನಿರ್ಮಿಸಿರುವ ಪೆಂಡಾಲ್‍ನಲ್ಲಿಯೇ ನಿನ್ನಿಯಿಂದ ಧರಣಿ ಕುಳಿತಿರುವ ಆಶಾ ಕಾರ್ಯಕರ್ತೆಯರು ರಾತ್ರಿಯಿಡೀ ಬರುತ್ತಲೇ ಇದ್ದ ಮಳೆಗೆ ಜಗ್ಗದೇ ತಮ್ಮ ಧರಣಿಯನ್ನು ಮುಂದುವರೆಸಿದರು. ಅವರ ಜೊತೆಗೆ ದೂರದ ಹಳ್ಳಿಗಳಿಂದ ಇಂದು ಮತ್ತಷ್ಟು ಆಶಾಗಳು ಬಂದು ಸೇರಿದರು.


ಧರಣಿಯನ್ನುದ್ದೇಶಿಸಿ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಸಂಚಾಲಕ ರವಿಕುಮಾರ್ ಅವರು “ನಿಗದಿತ ಗೌರವಧನಕ್ಕಾಗಿ ಅವಿರತ ಹೋರಾಟ ನಡೆಸಿದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 10,000/- ರೂ. ಗೌರವಧನ ನೀಡುವುದಾಗಿ ಮಾತುಕೊಟ್ಟಿದ್ದ ಸನ್ಮಾನ್ಯ ಮುಖ್ಯಮಂತ್ರಿಗಳು ತಮ್ಮ ಮಾತು ಮರೆತು ನಡೆದುಕೊಳ್ಳುತ್ತಿರುವುದು ರಾಜ್ಯದ ಆಶಾಗಳಿಗೆ ಬಗೆಯುತ್ತಿರುವ ದ್ರೋಹವೇ ಸರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಎಚ್.ಎಂ) ಮಾರ್ಗದರ್ಶಿ ನಿಯಮಗಳ ಪ್ರಕಾರ ಪ್ರತಿ ಜನವಸತಿ ಪ್ರದೇಶಕ್ಕೊಬ್ಬ ಆಶಾ ಕಾರ್ಯಕರ್ತೆ ಇರಬೇಕು ಹಾಗೂ ಅವರು ಕಾರ್ಯ ನಿರ್ವಹಿಸುವ ಜನವಸತಿಯ ಜನಸಂಖ್ಯೆ ಗರಿಷ್ಠ 1000 ದಾಟಬಾರದು. 1000ಕ್ಕಿಂತ ಹೆಚ್ಚಿದ್ದರೆ ಅದೇ ಜನವಸತಿ ಪ್ರದೇಶಕ್ಕೆ ಮತ್ತೊಬ್ಬ ಆಶಾಳನ್ನು ಸೇವೆಗೆ ತೆಗೆದುಕೊಳ್ಳಬೇಕಾಗಿದೆ. ಕನಿಷ್ಠ ಜನಸಂಖ್ಯೆ ಇಂತಿಷ್ಟೇ ಇರಬೇಂಬ ಯಾವುದೇ ಷರತ್ತು ಇರುವುದಿಲ್ಲ. ಆದರೆ ರಾಜ್ಯ ಸರ್ಕಾರವು ಎನ್‍ಎಚ್‍ಎಂ ನಿಯಮಗಳನ್ನು ಗಾಳಿಗೆ ತೂರಿ ಆಶಾ ಕಾರ್ಯಕರ್ತೆಯರು ಕೆಲಸ ಮಾಡುವಲ್ಲಿ ಕನಿಷ್ಠ 1000 ಜನರಿರಬೇಕು ಹಾಗೂ ಗರಿಷ್ಠ 2000 ಜನರಿರಬಹುದು ಎಂದು ನಿಗದಿಪಡಿಸಿದೆ. ಸಾಲದೆಂಬಂತೆ ತರ್ಕಬದ್ಧಗೊಳಿಸುವ ಹೆಸರಿನಲ್ಲಿ 1000ಕ್ಕಿಂತ ಕಡಿಮೆ ಜನರಿರುವ ಗ್ರಾಮದ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುವ ಹುನ್ನಾರವನ್ನು ಮಾಡಲಾಗುತ್ತಿದೆ. ಅವೈಜ್ಞಾನಿಕವಾಗಿ ಅವರ ಮೇಲೆ ಕಾರ್ಯನಿರ್ವಹಣಾ ಮೌಲ್ಯಮಾಪನವನ್ನು ಹೇರಿ, ಮೌಲ್ಯಮಾಪನವನ್ನಾಧರಿಸಿ ಕರ್ತವ್ಯದಲ್ಲಿ ಮುಂದುವರೆಸುವ ಅಥವಾ ತೆಗೆದು ಹಾಕುವ ಬೆದರಿಕೆ ಒಡ್ಡಲಾಗುತ್ತಿದೆ. ಕೆಲಸಕ್ಕೆ ಸೂಕ್ತ ಗೌರವಧನ ಕೇಳಿದರೆ ಅದನ್ನು ಕೊಡುವ ಬದಲು ಕೆಲಸದಿಂದಲೇ ತೆಗೆದು ಹಾಕುವ ಕ್ರಮ ಅತ್ಯಂತ ಖಂಡನೀಯ” ಎಂದರು.

ಆಶಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮಾತನಾಡಿ, “ಕಳೆದ 15-20 ವರ್ಷಗಳಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದುತ್ತಿರುವ ಆಶಾಗಳನ್ನು ಸರ್ಕಾರ ಖಾಲಿ ಕೈಲಿ ಮನೆಗೆ ಕಳಿಸುತ್ತಿದೆ. ಜನರ ಆರೋಗ್ಯ ರಕ್ಷಣೆಗಾಗಿ ಸೇವೆ ಸಲ್ಲಿಸಿದ ಆಶಾಗಳು ತÀಮ್ಮ ವೃದ್ಧಾಪ್ಯದಲ್ಲಿ ಯಾವುದೇ ಆಸರೆ ಇಲ್ಲದಂತಾಗುತ್ತಿದ್ದಾರೆ. ಆದ್ದರಿಂದ ಪಶ್ಚಿಮ ಬಂಗಾಳದ ಮಾದರಿಯಲ್ಲಿ ನಿವೃತ್ತರಾಗುವ ಆಶಾಗಳಿಗೆ ತಮ್ಮ ಮುಂದಿನ ಬದುಕಿಗಾಗಿ 5 ಲಕ್ಷ ರೂ. ಇಡಿಗಂಟು ನೀಡಬೇಕು” ಎಂದರು.

“ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಮಳೆಯಲ್ಲಿ ನೆನೆಯುತ್ತಾ, ಛಳಿಯಲ್ಲಿ ನಡುಗುತ್ತಾ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಹೋರಾಟದಿಂದ ಹಿಮ್ಮೆಟ್ಟಿಲ್ಲ. ನಮಗೆ ಸರ್ಕಾರದ ಅನುಕಂಪ ಬೇೀಕಿಲ್ಲ. ಬದಲಿಗೆ ನಮ್ಮ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಹಾಗೂ ಸಲ್ಲದ ನೆಪಗಳನ್ನು ನೀಡಿ ಕೆಲಸದಿಂದ ತೆಗೆದು ಹಾಕುವ ಎಲ್ಲಾ ಬೆದರಿಕೆಯ ಕ್ರಮಗಳನ್ನು ತಕ್ಷಣ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಅನಂತರ ಧರಣಿನ್ನು ಬೆಂಬಲಿಸಿ ಆರ್ಥಿಕ ತಜ್ಞ ಪ್ರೊ. ಜಿ. ಎನ್. ಮಲ್ಲಿಕಾರ್ಜುನಪ್ಪ ಮಾತನಾಡಿ, “ಮುಖ್ಯಮಂತ್ರಿಗಳು ತಾವು 7 ತಿಂಗಳ ಹಿಂದೆ ಕೊಟ್ಟ ಮಾತನ್ನು ಇದೂವರೆಗೂ ಕಾರ್ಯರೂಪಕ್ಕೆ ತರದಿದ್ದರೆ ಇದು ಅತ್ಯಂತ ಬೇಜವಾಬ್ದಾರಿತನವಾಗುತ್ತದೆ. ಸರ್ಕಾರವೇ ತಾನು ಕೊಟ್ಟ ಮಾತನ್ನು ಮರೆತರೆ ಜನರಿಗೆ ಹೋರಾಟ ಅನಿವಾರ್ಯ. ಆದ್ದರಿಂದ ಆಶಾಗಳ ಹೋರಾಟ ನ್ಯಾಯಸಮ್ಮತವಾಗಿದ್ದು, ನಿಮ್ಮ ಹೋರಾಟಕ್ಕೆ ಜಯವಾಗಲಿ” ಎಂದರು.

ಅನಂತರ ಎಐಡಿಎಸ್‍ಓ ಜಿಲ್ಲಾ ಸಂಚಾಲಕ ಈರಣ್ಣ, ಎಐಎಂಎಸ್‍ಎಸ್ ಜಿಲ್ಲಾ ಸಂಚಾಲಕರಾದ ಡಿ. ಸುಜಾತ ಧರಣಿಯನ್ನುದ್ದೇಶಿಸಿ ಮಾತನಾಡಿದರು.
ಅನಂತರ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ|| ರೇಣುಪ್ರಸಾದ್ ಅವರ ಮೂಲಕ ಸರ್ಕಾರಕ್ಕೆ ಈ ಕೆಳಗಿನ ಹಕ್ಕೊತ್ತಾಯಗಳ ಮನವಿ ಸಲ್ಲಿಸಲಾಯಿತು.

ಹಕ್ಕೊತ್ತಾಯಗಳು:
1. ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪೆÇ್ರೀತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು
2. 2025 ಮಾರ್ಚ್ ರಾಜ್ಯ ಬಜೆಟ್‍ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪೆÇ್ರೀತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
3. ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
4. ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು.
5. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.
6. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
7. ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು.
8. 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು. ಇತ್ಯಾದಿ.

ಎಐಯುಟಿಯುಸಿ ಜಿಲ್ಲಾ ಸಂಚಾಲಕರಾದ ರವಿಕುಮಾರ್, ಆಶಾ ಸಂಘದ ಜಿಲ್ಲಾಧ್ಯಕ್ಷೆ ಗಿರಿಜಮ್ಮ, ಮುಖಂಡರುಗಳಾದ ಮಂಜುಳಮ್ಮ, ಲಕ್ಷ್ಮಿಬಾಯಿ, ಗುರುಶಾಂತ, ನಾಗವೇಣಿ, ಪಾರ್ವತಮ್ಮ, ರಾಜಮ್ಮ, ಮಮತ, ಸವಿತ, ಪುಟ್ಟಮ್ಮ, ನೇತ್ರಾವತಿ, ವಸಂತಮ್ಮ, ವೀಣಾ, ಓಂಕಾರಮ್ಮ, ನಿಂಗಮ್ಮ ಮೊದಲಾದವರು ಧರಣಿಯ ನೇತೃತ್ವ ವಹಿಸಿದ್ದರು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸುಮಾರು 1000ಮಂದಿ ಆಶಾ ಕಾರ್ಯಕರ್ತೆಯರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಸಂಜೆಯ ನಂತರ ಸುರಿಯುತ್ತಿದ್ದ ಮಳೆಯ ನಡುವೆಯೂ ಧರಣಿ ಮಂದುವರೆದಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...