Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

Ashada Masa 2023 : ಆಷಾಢ ಮಾಸದ ಮಹತ್ವವೇನು ? ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳೇನು ? 

Facebook
Twitter
Telegram
WhatsApp

ಹಿಂದೂ ಕ್ಯಾಲೆಂಡರ್ ಪ್ರಕಾರ, ಆಷಾಢ ಮಾಸವು ಜ್ಯೇಷ್ಠ ಮಾಸದ ನಂತರ ಪ್ರಾರಂಭವಾಗುತ್ತದೆ. ಈ ವರ್ಷದ ಆಷಾಢ ಮಾಸವು ಜೂನ್ 19 ಸೋಮವಾರದಿಂದ ಪ್ರಾರಂಭವಾಗುತ್ತದೆ.

ಅದೇ ಸಮಯದಲ್ಲಿ ದಕ್ಷಿಣಾಯನವೂ ಈ ತಿಂಗಳಿನಿಂದ ಪ್ರಾರಂಭವಾಗುತ್ತದೆ. ಈ ಮಾಸದ ಹುಣ್ಣಿಮೆಯಂದು ಉತ್ತರಾಷಾಢ ನಕ್ಷತ್ರವು ಕಾಣಿಸಿಕೊಳ್ಳುವುದರಿಂದ ಈ ಮಾಸವನ್ನು ಆಷಾಢ ಎಂದು ಕರೆಯಲಾಗುತ್ತದೆ. ಸೂರ್ಯನು ಮಿಥುನ ರಾಶಿಯಿಂದ ಕರ್ಕರಾಶಿಗೆ ಪ್ರವೇಶಿಸಿದಾಗ ದಕ್ಷಿಣಾಯನ ಪ್ರಾರಂಭವಾಗುತ್ತದೆ.
ದಕ್ಷಿಣಾಯನವು ಈ ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವವರೆಗೆ ಇರುತ್ತದೆ.

ಅದರ ನಂತರ, ಉತ್ತರಾಯಾಣ ಪ್ರಾರಂಭವಾಗುತ್ತದೆ. ಈ ಮಾಸದಲ್ಲಿ ಪವಿತ್ರ ಸ್ಥಳಗಳಲ್ಲಿ ಮಾಡುವ ಸ್ನಾನ, ದಾನ ಧರ್ಮ, ಪಠಣ ಮತ್ತು ಪಾರಾಯಣ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ ಎಂದು ಹಲವರು ನಂಬುತ್ತಾರೆ.

ಜಗನ್ನಾಥ ರಥಯಾತ್ರೆಯು ಆಷಾಢ ಮಾಸದ ಶುಕ್ಲ ಪಕ್ಷದ ಎರಡನೇ ದಿನದಂದು ಪ್ರಾರಂಭವಾಗುತ್ತದೆ. ಈ ಹಬ್ಬವು ಹತ್ತು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುತ್ತದೆ. ಆಷಾಢ ಮಾಸದಲ್ಲಿಯೇ ತ್ರಿಮೂರ್ತಿ ಸ್ವರೂಪನಾದ ಗುರುವನ್ನು ಪೂಜಿಸುವ ದಿನವಾದ ಗುರು ಪೂರ್ಣಿಮೆ ಬರುತ್ತದೆ. ಇದನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಇಷ್ಟು ವಿಶೇಷಗಳಿರುವ ಆಷಾಢ ಮಾಸದಲ್ಲಿ ಏನು ಮಾಡಬೇಕು ? ಮತ್ತು ಏನು ಮಾಡಬಾರದು ? ಮಬ ಆಸಕ್ತಿಕರ ವಿಷಯಗಳನ್ನು ತಿಳಿದುಕೊಳ್ಳೋಣ.

ಆಷಾಢ ಮಾಸದ ವಿಶೇಷಗಳು

ಆಷಾಢ ಮಾಸದ ಶುದ್ಧ ಏಕಾದಶಿಯನ್ನು ಶಯನ ಏಕಾದಶಿ ಎಂದು ಕರೆಯಲಾಗುತ್ತದೆ.
ಈ ಶುಭ ದಿನದಿಂದ ಚಾತುರ್ಮಾಸ ವ್ರತ ಆರಂಭವಾಗುತ್ತದೆ. ಈ ಅವಧಿಯಲ್ಲಿ ಎಲ್ಲಾ ಶುಭ ಕಾರ್ಯಗಳನ್ನು ನಿಲ್ಲಿಸಲಾಗುತ್ತದೆ.

ಈ ತಿಂಗಳು ಇಷ್ಟಾರ್ಥಗಳನ್ನು ಈಡೇರಿಸುವ ತಿಂಗಳು ಎಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ ಭಗವಾನ್ ವಿಷ್ಣುವನ್ನು ಭಕ್ತಿಯಿಂದ ಪೂಜಿಸುವುದರಿಂದ ಒಳ್ಳೆಯ ಫಲ ಸಿಗುತ್ತದೆ ಎನ್ನುವುದು ಒಂದು ನಂಬಿಕೆ.

ಹಾಗೆಯೇ ಹರಿಯುವ ನೀರಿನಲ್ಲಿ ಅಂದರೆ ನದಿಗಳು ಮತ್ತು ಸಮುದ್ರಗಳಲ್ಲಿ ಸ್ನಾನ ಮಾಡಬೇಕು. ಈ ತಿಂಗಳಲ್ಲಿ ಅಂಗಾರಕನಿಗೆ (ಕುಜ) ಪೂಜಿಸುವುದರಿಂದ ನಿಮ್ಮ ಜೀವನದಲ್ಲಿನ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಹಾಗೆಯೇ ದುರ್ಗಾ ದೇವಿಯನ್ನು ಪೂಜಿಸುವುದರಿಂದ ಸಮೃದ್ಧಿ ಮತ್ತು ಸಂಪತ್ತು ಹೆಚ್ಚಾಗುತ್ತದೆ ಎಂಬ ನಂಬಿಕೆ.

ಶಾಸ್ತ್ರಗಳ ಪ್ರಕಾರ ಆಷಾಢ ಮಾಸದಲ್ಲಿ ಶುಭ ಕಾರ್ಯಗಳು ನಿಷಿದ್ಧ. ಅದರಲ್ಲೂ ಮದುವೆಯಂತಹ ಕಾರ್ಯಕ್ರಮಗಳನ್ನು ಮಾಡಲೇಬಾರದು. ನವವಿವಾಹಿತರು ಕೂಡ ಒಂದೆಡ ಸೇರುವುದಿಲ್ಲ. ನವವಿವಾಹಿತೆ ವಧುವನ್ನು ತವರು ಮನೆಗೆ ಕಳುಹಿಸುತ್ತಾರೆ. ಈ ಅವಧಿಯಲ್ಲಿ ಅತ್ತೆ-ಮಾವಂದಿರ ನಡುವೆ ಜಗಳವಾಗುವ ಸಂಭವವಿದೆ ಎಂದು ಹಿರಿಯರು ಹೇಳುತ್ತಾರೆ.

ಆಷಾಢ ಮಾಸವನ್ನು ಅನಾರೋಗ್ಯ ಮಾಸ ಎಂದೂ ಕರೆಯುತ್ತಾರೆ. ಏಕೆಂದರೆ ಈ ಅವಧಿಯಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚು. ಕಾಲುವೆಗಳು ಮತ್ತು ನದಿಗಳಲ್ಲಿ ಹರಿಯುವ ನೀರು ಕಲುಷಿತಗೊಳ್ಳುತ್ತದೆ. ಈ ನೀರನ್ನು ಕುಡಿಯುವುದರಿಂದ ರೋಗಗಳು ಬರುತ್ತವೆ. ಆಷಾಢದಲ್ಲಿ ಹೊಸ ನೀರು ಕುಡಿಯುವುದರಿಂದ ನೆಗಡಿ, ಜ್ವರ, ಭೇದಿ, ತಲೆನೋವು ಬರುವ ಸಾಧ್ಯತೆ ಇದೆ. ಮಹಿಳೆಯರಿಗೆ ಗರ್ಭಧರಿಸಲು ಈ ತಿಂಗಳು ಸೂಕ್ತವಲ್ಲ. ಈ ಕಾರಣಗಳಿಂದ ಆಷಾಢ ಮಾಸದಲ್ಲಿ ಕೆಲವು ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಗಮನಿಸಿ: ಇಲ್ಲಿ ಒದಗಿಸಲಾದ ಎಲ್ಲಾ ಮಾಹಿತಿಗಳು ಮತ್ತು ಪರಿಹಾರಗಳು ಧಾರ್ಮಿಕ ನಂಬಿಕೆಗಳನ್ನು ಆಧರಿಸಿವೆ.
ಇವುಗಳನ್ನು ಕೇವಲ ಊಹೆಗಳ ಆಧಾರದ ಮೇಲೆ ನೀಡಲಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

IND vs AUS TEST | ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಟೆದ ಜಸ್ಪ್ರೀತ್ ಬುಮ್ರಾ : ಈ ಸಾಧನೆ ಮಾಡಿದ ಇತರ ಭಾರತೀಯ ಆಟಗಾರರ ಮಾಹಿತಿ ಇಲ್ಲಿದೆ…!

ಸುದ್ದಿಒನ್ | ಟೀಂ ಇಂಡಿಯಾ ವೇಗಿ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಗಳಿಸುವ ಮೂಲಕ ಇತಿಹಾಸ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

error: Content is protected !!