Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆಗೆ ಚಿಂತನೆ : ಅಶೋಕ್‍ಬೆಳಗಟ್ಟ ಖಂಡನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 16 : ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವುದನ್ನು ಯುವ ನ್ಯಾಯವಾದಿ ಅಶೋಕ್‍ಬೆಳಗಟ್ಟ ತೀವ್ರವಾಗಿ ಖಂಡಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 43 ಲಕ್ಷದಷ್ಟಿರುವ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ನಾಯಕ ಜನಾಂಗಕ್ಕೆ ದೊಡ್ಡ ಪೆಟ್ಟು ಬೀಳುವುದರಲ್ಲಿ ಅನುಮಾನವಿಲ್ಲ. ನಾಯಕ ಸಮಾಜದ ಕೆ.ಎನ್.ರಾಜಣ್ಣ, ಸತೀಶ್‍ಜಾರಕಿಹೊಳಿ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ನಾಗೇಂದ್ರ ಇವರುಗಳು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಪರಿಶಿಷ್ಟ ವರ್ಗಗಳ ಸ್ಥಿತಿಗತಿಯನ್ನು ಚರ್ಚಿಸಬೇಕು. ನಮ್ಮ ಸಮಾಜದ ಪ್ರಸನ್ನಾನಂದಸ್ವಾಮಿಗಳು ಹರಿಹರದ ವಾಲ್ಮೀಕಿ ಗುರುಪೀಠದಿಂದ ಬೆಂಗಳೂರುವರೆಗೆ ಕಾಲ್ನಡಿಗೆ ಜಾಥ ನಡೆಸಿ ಮೀಸಲಾತಿ ಹೆಚ್ಚಳಕ್ಕಾಗಿ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸಿದಾಗ ಯಾವುದೇ ಪ್ರತಿಕ್ರಿಯೆ ತೋರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುರುಬ ಜನಾಂಗವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಎಷ್ಟೊಂದು ಕಾಳಜಿ ವಹಿಸುತ್ತಿದ್ದಾರೆ. ಜಾತಿ ಅಭಿಮಾನವಿರಬೇಕು. ಇಂತಹ ಅಂಧಾಭಿಮಾನವಿರಬಾರದೆಂದು ಅಶೋಕ್‍ಬೆಳಗಟ್ಟ ಮುಖ್ಯಮಂತ್ರಿಗಳ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

 

ಬುಡಕಟ್ಟು, ಜಾನಪದ ಸಂಸ್ಕøತಿಯುಳ್ಳ ನಾಯಕ ಜನಾಂಗ ಶೈಕ್ಷಣಿಕ, ಉದ್ಯೋಗದಿಂದ ಈಗಾಗಲೆ ವಂಚಿತವಾಗಿದೆ. ಇನ್ನು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ನಮ್ಮ ಗತಿಯೇನು? ಈಗಾಗಲೆ ಒಳ ಮೀಸಲಾತಿಯನ್ನು ಜಾರಿಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲೆಮಾರಿ ಮತ್ತು ಅಲೆಮಾರಿಗಳಿಗೆ ಅನ್ಯಾಯವೆಸಗಿದಂತೆ ನಮಗೂ ಮಂಕುಬೂದಿ ಎರಚುವ ತಂತ್ರಗಾರಿಕೆ ನಡೆಸುತ್ತಿರುವುದರ ವಿರುದ್ದ ಎಚ್ಚೆತ್ತುಕೊಳ್ಳುವಂತೆ ಅಶೋಕ್‍ಬೆಳಗಟ್ಟ ನಾಯಕ ಸಮಾಜದ ಮುಖಂಡರುಗಳಲ್ಲಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...