Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್. ಅಶೋಕ್ ನಾಮಫಲಕ ತೆಗೆದರೆ ಆ ಕೊಠಡಿಗೆ ಕಾಲಿಡುತ್ತೇನೆ : ಬಿಜೆಪಿ ಶಾಸಕ ವಿಶ್ವನಾಥ್

---Advertisement---

 

 

ಬೆಳಗಾವಿ: ಆರ್ ಅಶೋಕ್ ಅವರ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿಯಲ್ಲಿಯೇ ವಿರೋಧವಿತ್ತು. ಆದರೆ ಮುಂದಿನ ಲೋಕಸಭಾ ಚುನಾವಣೆಯ ಸ್ಟಾಟರ್ಜಿ ಬಿಜೆಪಿಯಲ್ಲಿ ಬೇರೆಯದ್ದೇ ಆಗಿತ್ತು. ಹೀಗಾಗಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಗೆ ಸಮಯ ತೆಗೆದುಕೊಂಡೇ ಆಯ್ಕೆ ಮಾಡಲಾಗಿತ್ತು. ಈ ನಡುವೆ ವಿಪಕ್ಷ ನಾಯಕ ಆರ್ ಅಶೋಕ್ ಇದ್ದರೆ ನಾನು ಆ ಕೊಠಡಿಗೆ ಹೆಜ್ಜೆ ಇಡುವುದಿಲ್ಲ ಎಂದು ಬಿಜೆಪಿ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಈ ಮೂಲಕ ಮನಸ್ತಾಪಗಳು ಇನ್ನು ಮುಂದುವರೆದಂತೆ ಕಾಣುತ್ತಿದೆ.

ಸದನದಲ್ಲಿ ಚರ್ಚೆ ಮಾಡಬೇಕಾದ ವಿಚಾರಗಳ ಕುರಿತು ಬಿಜೆಪಿ ನಾಯಕರು ಕ್ಲೋಸ್ಡ್ ಡೋರ್ ಮೀಟಿಂಗ್ ಅನ್ನು ಅರೆಂಜ್ ಮಾಡಿದ್ದರು. ಅದು ಪ್ರತಿಪಕ್ಷ ನಾಯಕನ ಕೊಠಡಿಯಲ್ಲಿಯೇ ಆಗಿತ್ತು‌. ಈ ವೇಳೆ ಶಾಸಕ ಮುನಿರತ್ನ ಅವರು, ಯಲಹಂಕ ಶಾಸಕ ವಿಶ್ವನಾಥ್ ಅವರ ಕೈಹಿಡಿದು ಕರೆದುಕೊಂಡು ಹೋಗುತ್ತಿದ್ದರು. ಆರ್. ಅಶೋಕ್ ಅವರ ಕೊಠಡಿ ಬರುತ್ತಿದ್ದಂತೆ ಒಳಗೆ ಬರಲು ನಿರಾಕರಣೆ ಮಾಡಿದರು.

‘ಅಶೋಕ್ ಹೆಸರಿನ ನಾಮಫಲಕ ಇರುವ ತನಕ ಆ ಕೊಠಡಿಗೆ ನಾನು ಕಾಲು ಇಡುವುದಿಲ್ಲ. ಬೇಕಾದರೆ ಆ ಬೋರ್ಡ್ ತೆಗೆಯಲಿ, ನಂತರದಲ್ಲಿ ನಾನು ಹೋಗುತ್ತೇನೆ’ ಎಂದು ಕಡ್ಡಿ ತುಂಡಾಗುವಂತೆ ಹೇಳಿದರು. ಇದೇ ವೇಳೆ ಬಿವೈ ವಿಜಯೇಂದ್ರ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ. ಇಬ್ಬರು ಕುಳಿತು ಮಾತುಕತೆ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment