ಬೆಂಗಳೂರು: ನಗರದ ಬ್ರಿಗೇಡ್ ಗೇಟ್ ವೇ ಅಪಾರ್ಟ್‌ಮೆಂಟ್ ನ ತಾರಸಿಯಲ್ಲಿ ಅಳವಡಿಸಲಾಗಿರುವ 354 ಕಿಲೋವಾಟ್ ಸಾಮರ್ಥ್ಯದ ತಾರಸಿ ಸೌರ ವಿದ್ಯುತ್ ಉತ್ಪಾದನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ಇಡೀ ಸಮಾಜವು ಈ ದಿಕ್ಕಿನಲ್ಲಿ ಮುನ್ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸ್ವಯಂ ವಿದ್ಯುತ್ ಉತ್ಪಾದನೆ ಪ್ರಮುಖ ವಿಷಯವಾಗಿದೆ. ನಾವು ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡರೂ ಪರಿಸರಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯವಾಗುತ್ತದೆ ಎಂದು ಸಚಿವರು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ 100 ಗಿಗಾವಾಟ್ ಗಳಷ್ಟು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಗುರಿಯನ್ನು ನಿಗದಿಗೊಳಿಸಿದ್ದಾರೆ. ಈ ಗುರಿ ಮುಟ್ಟಲು ಗಣನೀಯ ಪ್ರಮಾಣದಲ್ಲಿ ಕೊಡುಗೆ ನೀಡುವ ಜೊತೆಗೆ, ವಿದ್ಯಾರ್ಥಿ ಸಮುದಾಯವನ್ನು ಸುಸ್ಥಿರ ಅಭಿವೃದ್ಧಿ ಬಗ್ಗೆ ಸಂವೇದನಾಶೀಲಗೊಳಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಡಿಯ (ಎನ್ಇಪಿ-2020) ಶಿಕ್ಷಣ ಕ್ರಮದಲ್ಲಿ ಒತ್ತುಕೊಡಲಾಗುವುದು ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
ಈ ಸೌರ ವಿದ್ಯುತ್ ಉತ್ಪಾದನಾ ವ್ಯವಸ್ಥೆಯ ಅಳವಡಿಕೆಯೊಂದಿಗೆ ಬ್ರಿಗೇಡ್ ಗೇಟ್ ವೇ ಒಕ್ಕೂಟವು ಪರಿಸರ ಸ್ನೇಹಿಯಾಗುವತ್ತ ಮತ್ತೊಂದು ದೃಢವಾದ ಹೆಜ್ಜೆಯನ್ನು ಇರಿಸಿದೆ. ಈ ಮುಂಚೆಯೇ ಇಲ್ಲಿ ನೀರಿನ ಮರುಬಳಕೆ ಮತ್ತು ತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳನ್ನು ಅಳವಡಿಸಲಾಗಿತ್ತು ಎಂದರು. ಇದೇ ವೇಳೆ, ಇಡೀ ಸಮಾಜಕ್ಕೆ ಮಾದರಿಯಾಗುವಂತೆ ಸ್ವಂತ ಹಣದಲ್ಲಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಂಡಿರುವುದಕ್ಕಾಗಿ ಬ್ರಿಗೇಡ್ ಗೇಟ್ ವೇ ಒಕ್ಕೂಟದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿ ಅಭಿನಂದಿಸಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…