Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಕಾಂಕ್ಷಿ ಗಳಿಗೆ ಮಿಸ್ ಆಯ್ತು ಸಚಿವ ಸ್ಥಾನ : ಅಸಮಾಧಾನ ಹೊರ ಹಾಕಿದವರು ಯಾರ್ಯಾರು..?

---Advertisement---

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಇಂದು ನೂತನ ಸಚಿವರು‌ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಾಗಿದ್ದರು. ಆದರೆ ಒಂದಷ್ಟು ಶಾಸಕರಿಗೆ ಅಸಮಾಧಾನ ಉಂಟಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.

ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೂ ಸಚಿವ ಸ್ಥಾ‌ ಕೈತಪ್ಪಿದೆ. ಇದರಿಂದ ಬೇಸರ ಹೊರ ಹಾಕಿದ್ದು, ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇನ್ನು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದ ಶಿವಲಿಂಗೇಗೌಡ ಕೂಡ ಬೇಸರ ಹೊರ ಹಾಕಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಮಾಧ್ಯಮದವರ ಜೊತೆಗೂ ಸರಿಯಾಗಿ‌ ಮಾತನಾಡಿಲ್ಲ. ನಾನು ಏನು ಮಾತನಾಡುವುದಿಲ್ಲ ಎಂದು ಹೇಳಿ ಹೊರಟು ಹೋಗಿದ್ದಾರೆ.

ಇನ್ನು ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಇದ್ದ ಕಾರಣಕ್ಕೆ ಕಾಂಗ್ರೆಸ್ ಬಂದಿದ್ದ ಲಕ್ಷ್ಮಣ ಸವದಿ ಗೆಲುವು ಸಾಧಿಸಿ, ಶಾಸಕರಾಗಿದ್ದಾರೆ. ಆದರೆ ಈ ಬಾರಿ ಸಚಿವ ಸಂಪುಟದಲ್ಲಿ ಅವರಿಗೂ ಸ್ಥಾನ ನೀಡಿಲ್ಲ. ಹೀಗಾಗಿ ಬೇಸರ‌ ಮಾಡಿಕೊಂಡಿದ್ದಾರೆ. ಆದ್ರೆ ತಡವಾಗಿಯಾದರೂ ಸಚಿವ ಸ್ಥಾನ ನೀಡುವುದಾಗಿ‌ ತಿಳಿಸಿದ್ದಾರೆ.

ಪುಟ್ಟರಂಗಶೆಟ್ಟಿ, ಟಿಬಿ ಜಯಚಂದ್ರ, ವಿನಯ್ ಕುಲಕರ್ಣಿ, ಆರ್ ವಿ ದೇಶಪಾಂಡೆಗೂ ಸಚಿವ ಸ್ಥಾನ ಮಿಸ್ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...