ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಇಂದು ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳಾಗಿದ್ದರು. ಆದರೆ ಒಂದಷ್ಟು ಶಾಸಕರಿಗೆ ಅಸಮಾಧಾನ ಉಂಟಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.
ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೂ ಸಚಿವ ಸ್ಥಾ ಕೈತಪ್ಪಿದೆ. ಇದರಿಂದ ಬೇಸರ ಹೊರ ಹಾಕಿದ್ದು, ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇನ್ನು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದ ಶಿವಲಿಂಗೇಗೌಡ ಕೂಡ ಬೇಸರ ಹೊರ ಹಾಕಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಮಾಧ್ಯಮದವರ ಜೊತೆಗೂ ಸರಿಯಾಗಿ ಮಾತನಾಡಿಲ್ಲ. ನಾನು ಏನು ಮಾತನಾಡುವುದಿಲ್ಲ ಎಂದು ಹೇಳಿ ಹೊರಟು ಹೋಗಿದ್ದಾರೆ.
ಇನ್ನು ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಇದ್ದ ಕಾರಣಕ್ಕೆ ಕಾಂಗ್ರೆಸ್ ಬಂದಿದ್ದ ಲಕ್ಷ್ಮಣ ಸವದಿ ಗೆಲುವು ಸಾಧಿಸಿ, ಶಾಸಕರಾಗಿದ್ದಾರೆ. ಆದರೆ ಈ ಬಾರಿ ಸಚಿವ ಸಂಪುಟದಲ್ಲಿ ಅವರಿಗೂ ಸ್ಥಾನ ನೀಡಿಲ್ಲ. ಹೀಗಾಗಿ ಬೇಸರ ಮಾಡಿಕೊಂಡಿದ್ದಾರೆ. ಆದ್ರೆ ತಡವಾಗಿಯಾದರೂ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ.
ಪುಟ್ಟರಂಗಶೆಟ್ಟಿ, ಟಿಬಿ ಜಯಚಂದ್ರ, ವಿನಯ್ ಕುಲಕರ್ಣಿ, ಆರ್ ವಿ ದೇಶಪಾಂಡೆಗೂ ಸಚಿವ ಸ್ಥಾನ ಮಿಸ್ ಆಗಿದೆ.





GIPHY App Key not set. Please check settings