ವಿಜಯಪುರ: ಇಂದು ಸಿಂಧಗಿ ಕ್ಷೇತ್ರದ ಉಒಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಬೆಳಗ್ಗೆಯಿಂದಲೂ ಮತ ಏಣಿಕೆ ನಡೆಯುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದಾರೆ ಎಂಬಂತಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನುವಷ್ಟರ ಮಟ್ಟಿಗೆ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಯ ಎಂಬುದು ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಲು ಶುರು ಮಾಡಿದ್ದಾರೆ. ಈ ಖುಷಿಯ ಗಳಿಗೆಯಲ್ಲಿ ಯಾರೋ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಮಾಡಿದ್ದಾರೆ.
ಸಿಂಧಗಿ ತಾಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರುಗೌಡ ಬಿರಾದಾರ ಮೇಲೆ ಹಲ್ಲೆ ಮಾಡಿದ್ದಾರೆ. ರಮೇಶ್ ಭೂಸನೂರ್ ಗೆಲುವು ಸಾಧಿಸಿದ ಬಳಿಕ ಗದ್ದೆ ಕಡೆ ಹೊರಟಿದ್ದಾರೆ. ಈ ವೇಳೆ ಗುರುಗೌಡ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆಂದು ಗುರುಗೌಡ ಆರೋಪ ಮಾಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಗುರುಗೌಡಗೆ ಚಿಜಿತ್ಸೆ ಮುಂದುವರೆದಿದೆ.