ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಏ.13) : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಏಪ್ರಿಲ್ 13 ರಂದು ಚುನಾವಣೆ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.
ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ. ಮೇ 13 ಮತ ಎಣಿಕೆ ಕಾರ್ಯ ನಡೆದು, ಚುನಾವಣೆ ಫಲಿತಾಂಶ ಹೊರ ಬಿಳಲಿದೆ. ಮೇ 15 ರ ಒಳಗೆ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.
ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳು: 97.ಮೊಳಕಾಲ್ಮುರು (ಪರಿಶಿಷ್ಟ ಪಂಗಡ), 98.ಚಳ್ಳಕೆರೆ (ಪರಿಶಿಷ್ಟ ಪಂಗಡ), 99.ಚಿತ್ರದುರ್ಗ, 100.ಹಿರಿಯೂರು, 101.ಹೊಸದುರ್ಗ, 102.ಹೊಳಲ್ಕೆರೆ (ಪರಿಶಿಷ್ಟ ಜಾತಿ) ಸೇರಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳು ಇವೆ.
ಜಿಲ್ಲೆಯಲ್ಲಿ 13,99,676 ಮಂದಿ ಮತದಾರರು: 2023ರ ಏಪ್ರಿಲ್ 13 ರವರೆಗೆ ಜಿಲ್ಲೆಯಲ್ಲಿ 13,99,676 ಮಂದಿ ಮತದಾರರಿದ್ದಾರೆ. 699072 ಪುರುಷ ಮತದಾರರು ಹಾಗೂ 700532 ಮಹಿಳಾ ಮತದಾರರಿದ್ದಾರೆ. 72 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1399676 ಮಂದಿ ಮತದಾರರು ಇದ್ದಾರೆ.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 122622 ಪುರುಷ ಮತದಾರರು, 120393 ಮಹಿಳಾ ಮತದಾರರು, 12 ಇತರೆ ಮತದಾರರು ಸೇರಿದಂತೆ ಒಟ್ಟು 243027 ಮತದಾರರು ಇದ್ದಾರೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ 109602 ಪುರುಷ ಮತದಾರರು, 110486 ಮಹಿಳಾ ಮತದಾರರು 3 ಇತರೆ ಮತದಾರರು ಸೇರಿದಂತೆ ಒಟ್ಟು 220091 ಮತದಾರರಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 129255 ಪುರುಷ ಮತದಾರರು, 132411 ಮಹಿಳಾ ಮತದಾರರು 34 ಇತರೆ ಮತದಾರರು ಸೇರಿದಂತೆ ಒಟ್ಟು 261700 ಮತದಾರರು ಇದ್ದಾರೆ.
ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 120495 ಪುರುಷ ಮತದಾರರು, 122158 ಮಹಿಳಾ ಮತದಾರರು 15 ಇತರೆ ಮತದಾರರು ಸೇರಿದಂತೆ ಒಟ್ಟು 242668 ಮತದಾರರು ಇದ್ದಾರೆ. ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 99243 ಪುರುಷ ಮತದಾರರು 98005 ಮಹಿಳಾ ಮತದಾರರು ಸೇರಿದಂತೆ ಒಟ್ಟು 197248 ಮತದಾರರಿದ್ದಾರೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 117855 ಪುರುಷ ಮತದಾರರು, 117079 ಮಹಿಳಾ ಮತದಾರರು 8 ಇತರೆ ಮತದಾರರು ಸೇರಿದಂತೆ ಒಟ್ಟು 234942 ಮತದಾರರು ಇದ್ದಾರೆ.
1648 ಮತದಾನ ಕೇಂದ್ರಗಳು: ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರಗಳಿದ್ದು, ಜಿಲ್ಲೆಯಲ್ಲಿ ಒಟ್ಟು 1648 ಮತದಾನ ಕೇಂದ್ರಗಳಿವೆ. ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ-284, ಚಳ್ಳಕೆರೆ-259, ಚಿತ್ರದುರ್ಗ-283, ಹಿರಿಯೂರು-285, ಹೊಸದುರ್ಗ-240, ಹೊಳಲ್ಕೆರೆ-297 ಮತದಾನ ಕೇಂದ್ರಗಳು ಇವೆ.
ಚುನಾವಣಾಧಿಕಾರಿಗಳ ವಿವರ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ (ಎಸ್‍ಟಿ) ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ರಮೇಶ್ ಕುಮಾರ್, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ರೂಪಾ ಕಾರ್ಯನಿರ್ವಹಿಸುವರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರ (ಎಸ್‍ಟಿ) ಚುನಾವಣಾಧಿಕಾರಿಯಾಗಿ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ರೆಹಾನ್ ಪಾಷಾ ಕಾರ್ಯನಿರ್ವಹಿಸುವರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಡಾ.ನಾಗವೇಣಿ ಕಾರ್ಯನಿರ್ವಹಿಸುವರು.
ಹಿರಿಯೂರು ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೊರಮ ತಿಮ್ಮಪ್ಪ, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಕಾರ್ಯನಿರ್ವಹಿಸುವರು.
ಹೊಸದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪಟ್ಟ ರಾಜೇಗೌಡ ಕಾರ್ಯನಿರ್ವಹಿಸುವರು.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಎಸ್‍ಸಿ) ಚುನಾವಣಾಧಿಕಾರಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಟಿ.ವಿವೇಕಾನಂದ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಎನ್.ಜಿ.ನಾಗರಾಜ್ ಕಾರ್ಯನಿರ್ವಹಿಸುವರು.
ಆಯಾ ತಾಲ್ಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು.
ಕಂಟ್ರೋಲ್ ರೂಂ ಸ್ಥಾಪನೆ: ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಂಟ್ರೋಲ್ ಸ್ಥಾಪಿಸಲಾಗಿದೆ. ಚುನಾವಣಾ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಜಿಲ್ಲಾ ಕಂಟ್ರೋಲ್ ಸಂಖ್ಯೆ 1950 ಗೆ ಸಂಪರ್ಕಿಸಬಹುದು.
ಉಳಿದಂತೆ
ಮೊಳಕಾಲ್ಮುರು 08198-229234, ಚಳ್ಳಕೆರೆ-08195-250648, ಚಿತ್ರದುರ್ಗ-08194-222416, ಹಿರಿಯೂರು-08193-263091, ಹೊಸದುರ್ಗ-08199-295058, ಹೊಳಲ್ಕೆರೆ-08191-275062 ಗೆ ಸಂಪರ್ಕಿಸಬಹುದು.
ಚುನಾವಣಾ ವೆಚ್ಚ ವೀಕ್ಷಕರ ವಿವರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಗೆ ಮೂವರು ಐಆರ್‍ಎಸ್ ಅಧಿಕಾರಿಗಳನ್ನು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಚುನಾವಣಾ ಆಯೋಗ ನೇಮಿಸಿದೆ.
ಮೊಳಕಾಲ್ಮೂರು ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಇ.ಎಸ್. ನಿಧಿನ್ ಲಾಲ್ (ದೂರವಾಣಿ ಸಂಖ್ಯೆ-6360443121) ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತೀಕ್ ಕುಮಾರ್ ಮಿಶ್ರಾ (ದೂರವಾಣಿ ಸಂಖ್ಯೆ 6360497561)
ಹಿರಿಯೂರು, ಹೊಸದುರ್ಗ ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಕ್ಕೆ ಅರವಿಂದ್ ಪಿ ಬಾಣಸೊಂಡೆ (ದೂರವಾಣಿ ಸಂಖ್ಯೆ 8618340690) ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.