ಬೆಂಗಳೂರು : ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೊದಲ ವಿಧಾನಸಭೆ ಅಧಿವೇಶನ ಇಂದಿನಿಂದ (ಮೇ.22 ರಿಂದ 24 ರವರೆಗೆ) ಮೂರು ದಿನಗಳ ಕಾಲ ನಡೆಯಲಿದೆ.
ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಹೊಸದಾಗಿ ಚುನಾಯಿತರಾದ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಸುದೀರ್ಘ 34 ವರ್ಗಗಳ ನಂತರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ಶನಿವಾರ ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಂಟು ಕಾಂಗ್ರೆಸ್ ಶಾಸಕರು ಕರ್ನಾಟಕ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.