ಚಿತ್ರದುರ್ಗ, (ಆ.08): ನಗರದ ಬುರುಜಿನ ಹಟ್ಟಿ ನಿವಾಸಿ, ಸಹ ಶಿಕ್ಷಕ ಜಿ.ಎಸ್.ಮಹೇಶ್ (45) ಮಂಗಳವಾರ ಹೃದಯಾಘಾತದಿಂದ ನಿಧನರಾದರು.
ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಹೊಳಲ್ಕೆರೆ ರಸ್ತೆ ಕನಕ ವೃತ್ತ ಸಮೀಪದ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.
ಮೃತರು ಹಿರಿಯೂರು ತಾಲೂಕು ಮರಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.