Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣಕ್ಕೆ ರಾಜಕೀಯ ತಿರುವು: ಬಿಜೆಪಿ-ಕಾಂಗ್ರೆಸ್ ಮಾತಿನ ಸಮರ

---Advertisement---

ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ಈಗ ಚರ್ಚೆಗೆ ಕಾರಣವಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ಹೊಂದಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧಕ್ಕೆ ಅಡ್ಡ ಬಂದ ಗಂಡನನ್ನ ಕೊಲೆ ಮಾಡಲು ಹೋಗಿ ಆತನ ವಸಂತ ನಾಯ್ಕ್ ಬಲಿಯಾಗಿದ್ದಾನೆ ಎಂದು ದೂರು ದಾಖಲಾಗಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಿದ್ಧಾಪುರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ್ ಭಟ್‌ನನ್ನು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಪ್ರೋತ್ಸಾಹಿಸಿ ಬೆಳೆಸಿದ್ದು ಈ ಪ್ರಕರಣದಲ್ಲಿ ಅವರ ಪಾತ್ರವು ಮುಖ್ಯವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್‌ ಗಂಭೀರ ಆರೋಪ ಮಾಡಿದ್ದಾರೆ.

ಕಮಲಾಕರ ಭಟ್ ಎಂಬ ಜೋತಿಷಿ ಭಾಗಿಯಾದ ಕೊಲೆ ಕೇಸ್ ನಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರಂತವರ ಪಾತ್ರವಿಲ್ಲವೇ? ಕೊಲೆ ಆರೋಪಿ ಜೋತಿಷಿ “ಗುರೂಜಿ” ಕಮಲಾಕರ ಭಟ್ಟನನ್ನು ಒರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ ? ಒರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತವಾಗಿದೆ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಇದಕ್ಕೆ ಸುರೇಶ್ ಕುಮಾರ್ ಉತ್ತರಿಸಿದ್ದು,​ನಾನು ಜ್ಯೋತಿಷ್ಯವನ್ನಾಗಲಿ ತುಂಬಾ ನಂಬುವನೂ ಅಲ್ಲ, ಬಹಳ ಹಿಂದೆ ಯಶವಂತಪುರದ ಪೆಟ್ರೋಲ್ ಬಂಕ್ ಬಳಿ ನನ್ನ ಗಾಡಿಗೆ ಇಂಧನ ತುಂಬಿಸುತ್ತಿರುವಾಗ ಈ ವ್ಯಕ್ತಿಯ ಪರಿಚಯವಾಗಿತ್ತು. ನಾನು ಒಮ್ಮೆ ಮಾತ್ರ ಅವರನ್ನು ಭೇಟಿ ಮಾಡಿರುವುದು. ಈಗೇನಾದರೂ ನನಗೆ ಎದುರಿಗೆ ಸಿಕ್ಕರೆ ಅವರನ್ನು ಗುರುತು ಹಿಡಿಯುವುದೂ ಅಸಾಧ್ಯ. ​ಒಬ್ಬ ವ್ಯಕ್ತಿ ಮಾಡಿದ ಅಪರಾಧಕ್ಕೆ, ಆತನ ಪರಿಚಯವಿದ್ದ ಜನಪ್ರತಿನಿಧಿಯೇ ನೈತಿಕ ಹೊಣೆ ಹೊರಬೇಕು ಎಂಬ ನಿಮ್ಮ ವಾದ ತಮಾಷೆದಾಯಕ.ಇನ್ನಾದರೂ ಆಧಾರರಹಿತ ಆರೋಪಗಳನ್ನು ನಿಲ್ಲಿಸಿ, ಘನತೆಯುತ ರಾಜಕಾರಣ ಮಾಡಿ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now