Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಅಕ್ಟೋಬರ್ 26, 27, 28 ರಂದು ಪಾರಂಪರಿಕ ವೈದ್ಯರ ರಾಜ್ಯ ಸಮ್ಮೇಳನ : ಬಸವನಾಗಿದೇವಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.19 : ಪಾರಂಪರಿಕ ವೈದ್ಯರ ಹದಿನಾಲ್ಕನೆ ರಾಜ್ಯ ಸಮ್ಮೇಳನ ಅ.26, 27, 28 ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಯಲಿದೆ ಎಂದು ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಹೇಳಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಸಮ್ಮೇಳನ ಉದ್ಗಾಟಿಸಲಿದ್ದಾರೆ. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು, ಪ್ರಸನ್ನನಾಥಸ್ವಾಮೀಜಿ ಇವರುಗಳು ಸಾನಿಧ್ಯ ವಹಿಸುವರು.

ಪಾರಂಪರಿಕ ವೈದ್ಯ ಪರಿಷತ್ ರಾಜ್ಯಾಧ್ಯಕ್ಷ ಜಿ.ಮಹದೇವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆಂದು ತಿಳಿಸಿದರು.
ಐತಿಹಾಸಿಕ ಪರಂಪರೆಯುಳ್ಳ ಪಾರಂಪರಿಕ ವೈದ್ಯ ಪದ್ದತಿ ನಶಿಸಿ ಹೋಗುತ್ತಿರುವ ಕುರಿತು ಸಮ್ಮೇಳನದಲ್ಲಿ ಚರ್ಚಿಸಲಾಗುವುದು. ಎಂ.ಬಿ.ಬಿ.ಎಸ್. ವೈದ್ಯಕೀಯ ಪದ್ದತಿ ಇಲ್ಲದಂತ ಕಷ್ಟದ ಸಂದರ್ಭದಲ್ಲಿ ಪಾರಂಪರಿಕ ವೈದ್ಯ ಪದ್ದತಿಯಿಂದ ಅನೇಕ ದೊಡ್ಡ ದೊಡ್ಡ ಕಾಯಿಲೆಗಳನ್ನು ಗುಣಪಡಿಸಲಾಗುತ್ತಿತ್ತು.

ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಪಾರಂಪರಿಕ ವೈದ್ಯರನ್ನು ತುಂಬಾ ಕೇವಲವಾಗಿ ಕಾಣುತ್ತಿರುವುದು ನೋವಿನ ಸಂಗತಿ. ಸಿದ್ದೌಷಧಿಗಳ ಮೂಲಕ ಪಾರಂಪರಿಕ ವೈದ್ಯರು ಅನೇಕ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಕೊರೋನಾದಂತ ಸಾಂಕ್ರಾಮಿಕ ರೋಗಗಳು ಮತ್ತು ಜ್ವರ, ಸ್ತ್ರೀ ರೋಗ, ಸಂದಿವಾತ, ಚರ್ಮರೋಗ, ಪಶುವೈದ್ಯ, ಮಧುಮೇಹದ ಬಗ್ಗೆ ಗೋಷ್ಠಿಗಳು ನಡೆಯುತ್ತವೆ. ಐದು ಜನ ಪಾರಂಪರಿಕ ವೈದ್ಯರಿಗೆ ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದರು. ಪಾರಂಪರಿಕ ವೈದ್ಯ ಪರಿಷತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment