Connect with us

Hi, what are you looking for?

Home

ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಯಾಲಿಸಿಸ್ ಚಿಕಿತ್ಸಾ ಘಟಕ ಉದ್ಘಾಟಿಸಿದ ಡಾ. ಶಿವಮೂರ್ತಿ ಮುರುಘಾ ಶರಣರು

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.22) : ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ನಡುವೆ ಉತ್ತಮ ಬಾಂಧವ್ಯ ಇರಬೇಕು. ಮಾನವ ತನ್ನ ಅನುಕೂಲಕ್ಕೆ ಹಲವಾರು ಕ್ಷೇತ್ರಗಳನ್ನಾಗಿ ವಿಂಗಡಿಸಿಕೊಂಡಿಸಿದ್ದಾನೆ. ಅದೆಲ್ಲಕ್ಕಿಂತ ಮಿಗಿಲಾದ ಕ್ಷೇತ್ರ ವೈದ್ಯಕೀಯ ಕ್ಷೇತ್ರ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ಸಿ.ರಾಯ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, 08 ಬೆಡ್‍ಗಳ ಅತ್ಯಾಧುನಿಕ ಡಯಾಲಿಸಿಸ್ ಚಿಕಿತ್ಸಾ ಘಟಕ ಹಾಗೂ 40 ಹಾಸಿಗೆಗಳುಳ್ಳ ತೀವ್ರನಿಗಾ ಘಟಕವನ್ನು ಉದ್ಘಾಟಿಸಿ ಶ್ರೀಗಳು ಮಾತನಾಡಿದರು.

ಎಲ್ಲ ನೆಲೆಯಲ್ಲೂ ವೈದ್ಯಕೀಯ ಕ್ಷೇತ್ರ ಜೀವಪರವಾದುದು. ಅದನ್ನು ಜಗತ್ತಿಗೆ ಉತ್ತಮವಾಗಿ ಪರಿಚಯಿಸಿದವರು ಬಿ.ಸಿ. ರಾಯ್. ಇವರ ಸೇವೆಗೆ ಭಾರತ ಸರ್ಕಾರವು ಭಾರತರತ್ನ ಪ್ರಶಸ್ತಿ ಕೊಟ್ಟಿರುವುದು ಶ್ರೇಷ್ಠವಾದುದು. ಇದು ವೈದ್ಯಲೋಕಕ್ಕೆ ದೊಡ್ಡ ಗೌರವ. ಭಾರತೀಯರಾದ ನಾವು ಉತ್ತಮ ಮೌಲ್ಯಗಳನ್ನು ಪ್ರತಿಪಾದಿಸುತ್ತ ಬರುತ್ತಿದ್ದೇವೆ. ಕೊರೋನಾ ಸಂದರ್ಭದಲ್ಲಿ ಯಾವ ದೇವಾನುದೇವತೆಗಳು ಬರಲಿಲ್ಲ. ಆದರೆ ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಕೊರೋನಾ ಓಡಿಸಲು ಪಣ ತೊಟ್ಟಿತು. ವೈದ್ಯರು ಜೀವ ರಕ್ಷಕರು.

ಕೊರೋನಾ ಕಾಲದಲ್ಲಿ ಬಸವೇಶ್ವರ ಆಸ್ಪತ್ರೆ ಸೇವಾ ಕೇಂದ್ರವಾಗಿ ಕಾರ್ಯನಿರ್ವಹಿಸಿತು. ಸಂಸ್ಥೆ ನಡೆಸುವವರಿಗೆ ದೂರದೃಷ್ಟಿ ಇರಬೇಕು. ಮಲ್ಲಿಕಾರ್ಜುನ ಶ್ರೀಗಳು ದೂರದೃಷ್ಟಿ ಇಟ್ಟುಕೊಂಡು ವಿದ್ಯಾಪೀಠವನ್ನು ಆರಂಭಿಸಿದರು. ವಿದ್ಯಾಪೀಠ ಇಂದು ಆರ್ಥಿಕವಾಗಿ ಸಬಲೀಕರಣ ಸಾಧಿಸಿದೆ. ಬಸವೇಶ್ವರ ಕಾಲೇಜು ಮತ್ತು ಆಸ್ಪತ್ರೆಯು ಉತ್ತಮ ಚಿಕಿತ್ಸಾ ಸೌಲಭ್ಯ ಹೊಂದಿರುವುದನ್ನು ಪರಿಗಣಿಸಿ ಎನ್.ಎಂ.ಸಿ. ಅವರು ಬಸವೇಶ್ವರ ಕಾಲೇಜು ಮತ್ತು ಆಸ್ಪತ್ರೆಯ ಎಮರ್ಜನ್ಸಿ ಮೆಡಿಸಿನ್ ವಿಭಾಗಕ್ಕೆ 2 ಪಿಜಿ ಸೀಟ್‍ಗಳನ್ನು ನೀಡಿದ್ದಾರೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್ ಮಾತನಾಡಿ, ಬಿ.ಸಿ. ರಾಯ್ ಅವರು ಖ್ಯಾತ ವೈದ್ಯರು ಮಾತ್ರವಲ್ಲ ಪಶ್ಚಿಮಬಂಗಾಳದ ಮುಖ್ಯಮಂತ್ರಿಯೂ ಆಗಿದ್ದರು. ಕೋವಿಡ್-19 ನಮಗೆ ಅನೇಕ ಪಾಠಗಳನ್ನು ಕಲಿಸಿದೆ. ಬಸವೇಶ್ವರ ಆಸ್ಪತ್ರೆಯು ಕ್ಷಯರೋಗಿಗಳಿಗೆ 2015ರಲ್ಲಿ ರಾಜ್ಯದಲ್ಲಿ ಪ್ರಥಮವಾಗಿ ಉಚಿತ ಚಿಕಿತ್ಸೆಯೊಂದಿಗೆ ಅವರಿಗೆ ಹಾಸಿಗೆಯನ್ನು ಕಾಯ್ದಿರಿಸಿತ್ತು. ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಚಿಕಿತ್ಸೆಗೆ ಅವಕಾಶವಿದೆ. ಬಸವೇಶ್ವರ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ 80ಹಾಸಿಗೆಯಿಂದ 120ಕ್ಕೆ ಹೆಚ್ಚಿಸಿರುವುದು ಈ ಭಾಗದ ಜನರಿಗೆ ಆಶಾದಾಯಕ ಎಂದರು.

ಕಾಲೇಜಿನ ಡೀನ್ ಡಾ. ಜಿ. ಪ್ರಶಾಂತ್ ಮಾತನಾಡಿ, ಬಸವೇಶ್ವರ ಆಸ್ಪತ್ರೆಯಲ್ಲಿ 30 ವೆಂಟಿಲೇಟರ್, 120 ಐಸಿಯು ಬೆಡ್‍ಗಳ ವ್ಯವಸ್ಥೆಯಿದ್ದು, ಕೋವಿಡ್ ಸಂದರ್ಭದಲ್ಲಿ ಯಶಸ್ವಿಯಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.

ವೈದ್ಯರ ದಿನಾಚರಣೆ ನಿಮಿತ್ತ ವೈದ್ಯರುಗಳಾದ ಡಾ. ಕೌಸರ್, ಶ್ರೀಮತಿ ಜಯಲಕ್ಷ್ಮಿ ಮತ್ತು ಶ್ರೀಮತಿ ರಾಧಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅಥಣಿ ಶ್ರೀಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳು, ಚಳ್ಳಕೆರೆಯ ಶ್ರೀ ಬಸವಕಿರಣ ಸ್ವಾಮಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸವರಾಜು ಹೆಚ್.ಜೆ., ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಎಂ.ಟಿ. ಮಲ್ಲಿಕಾರ್ಜುನ ಸ್ವಾಮಿ, ಎಸ್.ಷಣ್ಮುಖಪ್ಪ, ಪಟೇಲ್ ಶಿವಕುಮಾರ್, ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ, ಡಾ. ನಾರಾಯಣಮೂರ್ತಿ, ಡಾ. ಅರವಿಂದ ಪಾಟೀಲ, ಡಾ.ತಿಮ್ಮರಾಜು ನಾಯಕ್, ಡಾ. ಪ್ರಸನ್ನ ಮೊದಲಾದವರಿದ್ದರು.

ಶ್ರೀಮತಿ ಸೌಭಾಗ್ಯ ಮತ್ತು ಶ್ರೀಮತಿ ಸಿದ್ಧಗಂಗಮ್ಮ ಪ್ರಾರ್ಥಿಸಿದರು. ಕಾಲೇಜಿನ ಡೀನ್ ಡಾ.ಜಿ. ಪ್ರಶಾಂತ್ ಸ್ವಾಗತಿಸಿದರು. ಶ್ರೀಮತಿ ಹೇಮಲತ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!