ಚಿತ್ರದುರ್ಗ ಕಚೇರಿಯಲ್ಲಿ ಕಾಂಗ್ರೆಸ್‍ನ 138 ನೇ ಸಂಸ್ಥಾಪನಾ ದಿನಾಚರಣೆ

1 Min Read

 

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಡಿಸೆಂಬರ್.28 : ಕಾಂಗ್ರೆಸ್‍ನ 138 ನೇ ಸಂಸ್ಥಾಪನಾ ದಿನವನ್ನು ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ರಾಷ್ಟ್ರಪಿತ ಮಹಾತ್ಮಗಾಂಧಿಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ 1885 ರಲ್ಲಿ ಕಾಂಗ್ರೆಸ್ ಸಂಸ್ಥಾಪನೆಯಾಯಿತು. ಅಲ್ಲಿಂದ ಇಲ್ಲಿಯವರೆಗೂ ಅನೇಕ ವರ್ಗದವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರುಗಳಾಗಿದ್ದಾರೆ. ಅದರಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, ಮಲ್ಲಿಕಾರ್ಜುನ ಖರ್ಗೆ ಇವರುಗಳು ಪ್ರಮುಖರು ಎನ್ನುವುದನ್ನು ಸ್ಮರಿಸಿದರು.

ದೇಶವನ್ನು ಬ್ರಿಟೀಷರ ಗುಲಾಮಗಿರಿಯಿಂದ ಹೊರತರಬೇಕೆನ್ನುವ ಉದ್ದೇಶದಿಂದ ಕಾಂಗ್ರೆಸ್ ಸಂಸ್ಥಾಪನೆಯಾಯಿತು. ಆಗ ಅನೇಕರು ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಪಂಚವಾರ್ಷಿಕ ಯೋಜನೆಯನ್ನು ಜಾರಿಗೆ ತಂದಿದ ಕಾಂಗ್ರೆಸ್ ಕೃಷಿ, ನೀರಾವರಿಗೆ ಉತ್ತೇಜನ ನೀಡಿತು. ಅನೇಕ ಡ್ಯಾಂಗಳು, ವಿಶ್ವವಿದ್ಯಾನಿಲಯಗಳು, ಕೈಗಾರಿಕೆ, ಸ್ಟೀಲ್ ಪ್ಲಾಂಟ್, ರೈಲ್ವೆ ಇನ್ನು ಪ್ರಮುಖ ಯೋಜನೆಗಳು ಸೇರಿವೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಸೇವಾದಳದ ಅಧ್ಯಕ್ಷ ಬೂತೇಶ್ ಇನ್ನು ಅನೇಕರು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *