Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಆರೋಪಿಗಳ ಜೊತೆ ಪೊಲೀಸರಿಂದ ಸ್ಥಳ ಮಹಜರು

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ.14  : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಈ ಕೇಸಿಗೆ ಸಂಬಂಧಿಸಿದಂತೆ ಹದಿನಾಲ್ಕು ಜನ ಜೈಲಿನಲ್ಲಿದ್ದಾರೆ. ಇದೀಗ ಪೊಲೀಸರು ಚಿತ್ರದುರ್ಗಕ್ಕೆ ಆರೋಪಿಗಳನ್ನು ಕರೆತಂದು ರಾತ್ರಿ ಸ್ಥಳ ಮಹಜರು ನಡೆಸಿದ್ದಾರೆ.

ಆರೋಪಿ ರಘು ಜೊತೆಗೆ ಹೋಗಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಹೇಗೆ, ಎಲ್ಲಿಂದ ಕರೆದುಕೊಂಡು ಹೋದರು ಎಂಬ ಮಾಹಿತಿ ಕಲೆ ಹಾಕಿರುವ ಪೊಲೀಸರು, ಅಲ್ಲಿಂದ ಸ್ಥಳ ಮಹಜರು ಮಾಡಿದ್ದಾರೆ. ಮೊದಲಿಗೆ ಕುಂಚಿಕಲ್ ಬಳಿ ಇರುವ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಬಳಿಯ ಟೀ ಸ್ಟಾಲ್ ಹತ್ತಿರ ಸ್ಥಳ ಮಹಜರು ನಡೆಸಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ದರು.

ಆರೋಪಿ ರಘು ಮೃತ ರೇಣುಕಾ ಸ್ವಾಮಿಯನ್ನು ದರ್ಶನ್ ಬಳಿ ಕರೆದೊಯ್ದಲು ಚಿತ್ರದುರ್ಗ ನಗರದಿಂದ ಆಟೋ ಮೂಲಕ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಬಳಿಗೆ ಕರೆದುಕೊಂಡು ಹೋಗಿ ನಂತರ ಅಲ್ಲಿಂದ ಟ್ಯಾಕ್ಸಿ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು ಈ ಹಿನ್ನೆಲೆಯಲ್ಲಿ ಆರೋಪಿಯ ಹೇಳಿಕೆ ಪೊಲೀಸರು ಸ್ಥಳ ಮಹಜರು ನಡೆಸಿದರು.

 

ಕೊಲೆ ಕೇಸಿನಲ್ಲಿ ಹದಿನೇಳು ಮಂದಿ ಭಾಗಿಯಾಗಿದ್ದರು. ಈಗ ಹದಿನಾಲ್ಕು ಮಂದಿ ಪೊಲೀಸರ ವಶದಲ್ಲಿದ್ದಾರೆ. ಆದರೆ ಇನ್ನಿಬ್ಬರು ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟದಲ್ಲಿದ್ದಾರೆ. ರವಿ ಎಂಬಾತ ನಿನ್ನೆ ತಾನೇ ಬಂದು ಪೊಲೀಸರಿಗೆ ಸರೆಂಡರ್ ಆಗಿದ್ದಾನೆ. ಇನ್ನು ಪೊಲೀಸರಿಂದ ತೀವ್ರ ತನಿಖೆಯಾಗುತ್ತಿದ್ದು, ಎಲ್ಲಾ ಕಡೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಉಳಿದವರು ಆರೋಪಿ ಸ್ಥಾನದಲ್ಲಿ ನಿಂತಿದ್ದು, ಇನ್ನಿಬ್ಬರ ಹುಡುಕಾಟ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment