ಢಾಕಾ: ಇದ್ದಕ್ಕಿದ್ದಂತೆ ಸಂಭವಿಸಿದ ಅಗ್ನಿ ಅವಘಡದಲ್ಲಿ 32 ಮಂದಿ ಸಜೀವ ದಹನವಾಗಿರುವ ಘಟನೆ ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸೂಚನೆಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅದು ಮೂರು ಅಂತಸ್ತಿನ ಹಡಗು. ಜಕಾಕತಿ ಟೌನ್ ಬಳಿಯ ನದಿಯಲ್ಲಿ ಈ ದುರಂತ ನಡೆದಿದೆ. ಇದ್ದಕ್ಕಿದ್ದಂತೆ ಹತ್ತಿದ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 32 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಡಗುಗಳ ಸರಿಯಾದ ನಿರ್ವಹಣೆ ಇಲ್ಲದಿರುವುದು ಮತ್ತು ಸೌಲಭ್ಯಗಳಿಲ್ಲದಿರುವುದು ಇಂಥ ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಸದ್ಯ ಕಾರ್ಯಾಚರಣೆ ಮುಂದುವರೆದಿದೆ. ಮೃತದೇಹಗಳನ್ನ ಹೊರ ತೆಗೆಯಲಾಗುತ್ತಿದೆ. ಬೆಂಕಿ ಆವರಿಸಿಕೊಂಡ ಭಯಕ್ಕೆ ಸಾಕಷ್ಟು ಜನ ನೀರಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆಂಬುದು ವರದಿಯಾಗಿದೆ.